Featured

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – vishwanews24

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ

ಹಾಸನ: ಚನ್ನರಾಯಪಟ್ಟಣದ  ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.

ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ (19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಈಕೆ ಮೊದಲ ವರ್ಷದ ಬಿಎ ಓದುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

ಯುವತಿ ಸುಮಾರು ಒಂದುವರೆ ವರ್ಷದಿಂದ ನವೀನ್‌ ಎಂಬಾತನನ್ನು  ಪ್ರೀತಿಸುತ್ತಿದ್ದಳು. ನವೀನ್‌ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ಬೇಕರಿಯಲ್ಲಿ ರಚಿತಾ ತಾಯಿ ಸಾಕಮ್ಮ ಕೆಲಸ ಮಾಡುತ್ತಿದ್ದರು. ಇಬ್ಬರು ಪ್ರೀತಿಸುವ ವಿಷಯವನ್ನು ಸಾಕಮ್ಮ ಬಳಿ ರಚಿತಾ ಹಾಗೂ ನವೀನ್ ಹೇಳಿದ್ದರು. ಮದುವೆ ಮಾಡಿಸುವುದಾಗಿ ರಚಿತಾ ತಾಯಿ ಭರವಸೆಕೊಟ್ಟಿದ್ದರು. ಆದರೆ ಇತ್ತೀಚಿಗೆ ರಚಿತಾಳಿಗೆ ನವೀನ್ ಕಿರುಕುಳ ನೀಡುತ್ತಿದ್ದ ಎಂದು ಸಾಕಮ್ಮ ಆರೋಪಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್…

4 minutes ago

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…

22 minutes ago

ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…

35 minutes ago

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…

44 minutes ago

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ  – vishwanews24

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ  ಚಿಕ್ಕಮಗಳೂರು: ಕೃಷಿ…

50 minutes ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ…

57 minutes ago