ಕಾರ್ಕಳ : ನೇತಾಜಿ ಸುಭಾಶ್ ಚಂದ್ರ ಬೋಸ್ ರವರ 125 ನೇ ಜನ್ಮದಿನದ ಅಂಗವಾಗಿ ” ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ “ಕಾರ್ಕಳ ಇವರ ಆಶ್ರಯದಲ್ಲಿ ಹಾಗೂ ಕಾರ್ಕಳದ ಯುವಜನತೆ ಸಹಭಾಗಿತ್ವದಲ್ಲಿ “Republic Day Run” ಎಂಬ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ.
26.01.2021 ನೇ ಮಂಗಳವಾರ ಬೆಳಗ್ಗೆ 6.00 ರ ನಂತರ ಈ ಸ್ಪರ್ಧೆಯು ಪ್ರಾರಂಭವಾಗಲಿದೆ. 1Km, 14Km, 7Km ಹಾಗು 4Km ಎಂಬ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಯುವಕರಲ್ಲಿ ಬಹುಮುಖ ಪ್ರತಿಭೆಗಳು ಹೇರಳವಾಗಿದ್ದು, ಇಂಥಾ ಪ್ರತಿಭೆಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಂತಹ ಕಾರ್ಯವೇ ಈ ಓಟಕ್ಕೆ ಸ್ಫೂರ್ತಿ ಎಂದು RPCA,ಕಾರ್ಕಳ ಮುಖ್ಯಸ್ಥರಾದ ಶ್ರೀ ರಾಘವೇಂದ್ರ ಪ್ರಭು ರವರು ತಿಳಿಸಿದ್ದಾರೆ.
ಇನ್ನು ಈ ಸ್ಪರ್ಧೆಯಲ್ಲಿ ಯುವಕರಷ್ಟೇ ಅಲ್ಲದೆ ಹಿರಿಯರಿಗೂ ಅವಕಾಶವಿದೆ. ಆದ್ರೆ ಇದಕ್ಕೆ ವಿಶೇಷ ಅನುಮತಿಯ ಅವಶ್ಯಕತೆ ಇದೆ.ವಿಶೇಷ ಅನುಮತಿ ಪಡೆದು 50 ವರ್ಷ ಮೇಲ್ಪಟ್ಟ ಹಿರಿಯರು ಸಹ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಸ್ಪರ್ಧೆಯ ವಿಜೇತರಿಗೆ ಆಕರ್ಷಿತ ಬಹುಮಾನವಿರಲಿದ್ದು, ನೋಂದಣೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9844505610ಗೆ ಕರೆ ಮಾಡಬಹುದು.
ಇದನ್ನೂ ಓದಿ : ಮಂಗಳೂರು :ತಮ್ಮ ಹೆಸರು ಫಲಕದಲ್ಲಿ ತುಳು ಲಿಪಿ ಬಳಸಿದ ಮೊದಲ ನಗರ ಪೊಲೀಸ್ ಆಯುಕ್ತ N. ಶಶಿಕುಮಾರ್ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…