Featured

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನವನ್ನು’ಪರಾಕ್ರಮ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ..Vishwanews24

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನವನ್ನು’ಪರಾಕ್ರಮ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ..

ನವದೆಹಲಿ: ಪ್ರತಿ ವರ್ಷ ಆಚರಿಸಲಾಗುವ ಸ್ವತಂತ್ರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯನ್ನು ಈ ಬಾರಿ ‘ಪರಾಕ್ರಮ ದಿನ’ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೇಂದ್ರ ಸಂಸ್ಕೃತಿ ಸಚಿವಾಲಯ ಜನವರು 23, 2021 ರಂದು ಸುಭಾಶ್ ಚಂದ್ರ ಬೋಸ್ ಜಯಂತಿ ಆಚರಿಸಲಾಗುವುದು ಎಂದು ಹೇಳಿದೆ.

ಜನವರಿ 23, 2021 ರಂದು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ಉತ್ಸವವನ್ನು ಆಚರಿಸಲಾಗುತ್ತಿದೆ. ಈ ದಿನದಂದೇ ಕೇಂದ್ರ ಸರ್ಕಾರ ಅವರ ಜನ್ಮದಿನವನ್ನು ಪರಾಕ್ರಮ ದಿನ ರೂಪದಲ್ಲಿ ಆಚರಿಸಲಿದೆ.

ಇದಕ್ಕೆ ಸಂಬಂಧಿಸಿದಂತೆ ತನ್ನ ಅಧಿಸೂಚನೆಯಲ್ಲಿ ಬರೆದುಕೊಂಡಿರುವ ಸಂಸ್ಕೃತಿ ಇಲಾಖೆ, ” ಭಾರತದ ಜನರು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ವರ್ಷವನ್ನು ದೇಶಕ್ಕೆ ಈ ಮಹಾನ್ ನಾಯಕ ನೀಡಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸುತ್ತಾರೆ. ಹೀಗಾಗಿ ಭಾರತ ಸರ್ಕಾರ ಸುಭಾಶ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಜನವರಿ 23, 2021ಕ್ಕೆ ಆರಂಭಿಸುವ ನಿರ್ಯಾಯ ಕೈಗೊಂಡಿದೆ. ಈ ದಿನದಂದು ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಲ್ಲಿ ಅವರನ್ನು ಸತ್ಕರಿಸಲಾಗುವುದು” ಎಂದು ಹೇಳಿದೆ.

“ರಾಷ್ಟ್ರದ ಪ್ರತಿ ಬೋಸ್ ಅವರಿಗಿದ್ದ ಅದಮ್ಯ ಭಾವನೆ ಹಾಗೂ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಸಂಸ್ಕೃತಿ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲ ಇನ್ನು ಮುಂದೆ ಪ್ರತಿ ವರ್ಷ ಜನವರಿ 23 ರಂದು ಅವರ ಜನ್ಮದಿನವನ್ನು ‘ಪರಾಕ್ರಮ ದಿನ’ವೆಂದು ಆಚರಿಸಲಾಗುವುದು. ಇದರಿಂದ ದೇಶದ ಜನತೆ ಅದರಲ್ಲೂ ವಿಶೇಷವಾಗಿ ಯುವಕರಲ್ಲಿ ವಿಪತ್ತುಗಳನ್ನು ಎದುರಿಸಲು ನೇತಾಜಿ ಅವರ ಜೀವನದಿಂದ ಪ್ರೇರಣೆ ಸಿಗಲಿದೆ ಮತ್ತು ಅವರಲ್ಲಿ ದೇಶಭಕ್ತಿ ಹಾಗೂ ಸಾಹಸದ ಭಾವನೆ ತುಂಬಿಕೊಳ್ಳಲಿದೆ” ಎಂದು ಇಲಾಖೆ ಹೇಳಿದೆ.

ಬೋಸ್ ಅವರ 125ನೇ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಖುದ್ದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕೊಲ್ಕತಾದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಕಾರ್ಯಕ್ರಮವೊಂದರಲ್ಲಿ ಶಾಮೀಲಾಗಲಿದ್ದಾರೆ ಹಾಗೂ ನೇತಾಜಿ ಸುಭಾಸ್ ಚಂದ್ರ ಮೆಮೋರಿಯಲ್ ಸಂಗ್ರಹಾಲಯವನ್ನು ಕೂಡ ಉದ್ಘಾಟಿಸಲಿದ್ದಾರೆ..

ಬಿಜೆಪಿ ಶಿಸ್ತು ಉಳಿಸಿಕೊಂಡರೆ ಮಾತ್ರ ಪಕ್ಷ ಸದೃಢವಾಗಿ ಬೆಳೆಯಬಲ್ಲದು, ಇಲ್ಲವಾದರೆ ಕಾಂಗ್ರೆಸ್ ಸ್ಥಿತಿಯೇ ಬರಬಹುದು : ಡಿ.ವಿ. ಸದಾನಂದ ಗೌಡ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago