ಕಾಠ್ಮಂಡು: ನೇಪಾಳದಲ್ಲಿ ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ಹೊಂದಿದ್ದು ಪ್ರಾರ್ಥಮಿಕ ವರದಿಗಳ ಪ್ರಕಾರ 128 ಮಂದಿ ಸಾವನ್ನಪ್ಪಿದ್ದಾರೆ.
ದುರಂತದಲ್ಲಿ ನೂರಾರು ಮಂದಿ ಗಾಯಗೊಂಡಿದ್ದರೆ ಸಾವಿರಾರು ನ ಮನೆ ಮಠ ಕಳಕೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಭೂಕಂಪಪೀಡಿತ ಪ್ರದೇಶಗಳಲ್ಲಿ ಮನೆಗಳು ಕುಸಿದು ಬಿದ್ದಿದ್ದು ಜನ ಬೀದಿಗೆ ಬಿದ್ದಿದ್ದಾರೆ. ರಕ್ಷಣಾ ಕಾರ್ಯಗಳು ಆರಂಭವಾಗಿದ್ದು ಕೆಲವೆಡೆ ಇನ್ನೂ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲವೆಂದು ಸ್ಥಳೀಯ ಅಧಿಕಾರಿ ಹರೀಶ್ ಚಂದ್ರ ಶರ್ಮಾ ಮಾಹಿತಿ ನೀಡಿದ್ದಾರೆ. ಭೀಕರ ದುರಂತದ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ.
ಭೂಕಂಪದ ಕೇಂದ್ರ ಬಿಂದುವಿನಿಂದ ಸುಮಾರು 800 ಕಿಲೋಮೀಟರ್ ದೂರದಲ್ಲಿರುವ ಭಾರತದ ರಾಜಧಾನಿ ಹೊಸದಿಲ್ಲಿ ಪ್ರದೇಶದಲ್ಲಿ ಕೂಡಾ ಭೂಕಂಪದ ಅನುಭವ ಆಗಿದೆ. ಆದರೆ ಬಹುತೇಕ ಮಂದಿ ನಿದ್ದೆಯಲ್ಲಿ ಇದ್ದ ಸಂದರ್ಭದಲ್ಲಿ ಇದು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಶುಕ್ರವಾರ ಮಧ್ಯರಾತ್ರಿಗಿಂತ ಸ್ವಲ್ಪ ಮುಂಚೆ ಈ ದುರಂತ ಸಂಭವಿಸಿದ್ದು, ಪರ್ವತಶ್ರೇಣಿಗಳಿಂದ ಕೂಡಿದ ಗ್ರಾಮದಲ್ಲಿ ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ. 128 ಮಂದಿ ಈಗಾಗಲೇ ಮೃತಪಟ್ಟಿದ್ದು, ಹಲವು ಪ್ರದೇಶಗಳ ಜತೆ ಸಂಪರ್ಕ ವ್ಯವಸ್ಥೆ ಕಡಿದು ಹೋಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 2015ರಲ್ಲಿ ಈ ಬೆಟ್ಟ ರಾಷ್ಟ್ರದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿ, 9 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟು, 10 ಲಕ್ಷ ಕಟ್ಟಡಗಳು ಹಾನಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…