Featured

ನೇಪಾಳ ಪ್ರಧಾನಿ ಇಂದು ಭಾರತಕ್ಕೆ ಆಗಮನ ; ಮೂರು ದಿನಗಳ ಭಾರತ ಪ್ರವಾಸ – Vishwanews24

ನೇಪಾಳ ಪ್ರಧಾನಿ ಇಂದು ಭಾರತಕ್ಕೆ ಆಗಮನ ; ಮೂರು ದಿನಗಳ ಭಾರತ ಪ್ರವಾಸ – Vishwanews24

ನವದೆಹಲಿ: ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಮೂರು ದಿನಗಳ ಭಾರತ ಪ್ರವಾಸ ಕೈಗೊಳ್ಳುವ ಸಲುವಾಗಿ ಶುಕ್ರವಾರ ದೆಹಲಿಗೆ ಆಗಮಿಸಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಮೊದಲ ವಿದೇಶೀ ಭೇಟಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಮಂತ್ರಣದ ಹಿನ್ನೆಲೆಯಲ್ಲಿ ಈ ಭೇಟಿ ನಡೆಯುತ್ತಿದೆ. ಮೊದಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ನೇಪಾಳ ಪ್ರಧಾನಿ ಭೇಟಿಯಾಗಲಿದ್ದು, ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಪತ್ನಿ ಡಾ. ಅರ್ಜು ದೇವುಬಾ ಹಾಗೂ ಉನ್ನತ ಮಟ್ಟದ ನಿಯೋಗವೂ ಅವರೊಂದಿಗೆ ಭಾರತ ಭೇಟಿ ಕೈಗೊಳ್ಳಲಿದೆ.

ದೆಹಲಿಯಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಳಿಕ ಉತ್ತರ ಪ್ರದೇಶದ ವಾರಣಾಸಿಗೆ ತೆರಳಲಿದ್ದಾರೆ. ಜುಲೈ 2021ರಲ್ಲಿ ಪ್ರಧಾನಿಯಾದ ಬಳಿಕ ಇದು ಅವರ ಮೊದಲ ವಿದೇಶಿ ಭೇಟಿಯಾಗಿದೆ ಎನ್ನಲಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago