ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

Featured, ರಾಜ್ಯ ನ್ಯೂಸ್

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

​ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರೋಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

ಇದನ್ನೂ ಓದಿ :

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

​ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.

​ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಇದನ್ನೂ ಓದಿ :

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

​ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply