ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರೋಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.
ಇದನ್ನೂ ಓದಿ :
ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.
ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.
ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಇದನ್ನೂ ಓದಿ :
ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್…
ಕಟಪಾಡಿ: ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…