Featured

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ

ಬೆಂಗಳೂರು: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ದುರಂತದಲ್ಲಿ ಕನ್ನಡಿಗರೂ ಸಿಲುಕಿಕೊಂಡಿದ್ದು, ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿದ್ದಾರೆ.

ಮೂಲತಃ ಬೆಂಗಳೂರಿನವರಾಗಿದ್ದು, ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಾಲ್ವರು ಯಾತ್ರಿಕರು ಮಾನಸ ಸರೋವರ ಯಾತ್ರೆಗಾಗಿ ಅಮೆರಿಕದಿಂದ ನೇಪಾಳಕ್ಕೆ ಆಗಮಿಸಿದ್ದರು. ನಿನ್ನೆ ಪ್ರವಾಹ ಸಂಭವಿಸಿದ ಪ್ರದೇಶದಲ್ಲಿದ್ದ ಚೀನಾ ಎಂಬೆಸ್ಸಿಗೆ ತೆರಳಿದ್ದ ಇವರು, ಪ್ರವಾಹದ ಬಳಿಕ ಸ್ನೇಹಿತರು ಹಾಗೂ ಕುಟುಂಬಸ್ಥರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅವರ ಸ್ನೇಹಿತರು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (KSDMA) ಕರೆ ಮಾಡಿ ಮಾಹಿತಿ ನೀಡಿದ್ದು, ಪತ್ತೆಗಾಗಿ ನೆರವು ಕೋರಿದ್ದಾರೆ.

ಇಬ್ಬರು ಸುರಕ್ಷಿತ: ಇದೇ ವೇಳೆ ಹೈದರಾಬಾದ್‌ನ 23 ಮಂದಿ ಹಾಗೂ ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 25 ಜನರ ತಂಡ ನೇಪಾಳ ಪ್ರವಾಸ ಕೈಗೊಂಡಿತ್ತು. ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮಲ್ಲಿನಾಥ್ ಕೊಲಕುಂದಿ ಹಾಗೂ ಸಂಗಮೇಶ್ ಕನಕಪುರ ಎಂಬ ಇಬ್ಬರನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಯಶಸ್ವಿಯಾಗಿ ಸಂಪರ್ಕಿಸಿದೆ.

ಸದ್ಯ ಇಬ್ಬರೂ ಸುರಕ್ಷಿತವಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ರಕ್ಷಿಸಲ್ಪಟ್ಟ ಕನ್ನಡಿಗರನ್ನು ನೇಪಾಳದಿಂದ ನವದೆಹಲಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುತ್ತಿದೆ.

Vishwa News 24

Recent Posts

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

21 seconds ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

5 minutes ago

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…

23 minutes ago

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…

32 minutes ago

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

20 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

20 hours ago