Featured

ನೇಹಾ ಕೊಲೆ ಪ್ರಕರಣ: ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ : ಸಿಐಡಿ ಅಧಿಕಾರಿಗಳ ಸ್ಪಷ್ಟನೆ – vishwanews24

ನೇಹಾ ಕೊಲೆ ಪ್ರಕರಣ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ ಜಿಹಾದ್ (ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ. ಮದುವೆಗೆ ನಿರಾಕರಿಸಿದಕ್ಕೆ ನೇಹಾಳನ್ನು ಫಯಾಜ್​ ಕೊಲೆ ಮಾಡಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.​

ಕೊಲೆಯಾದ 81 ದಿನಗಳ ಬಳಿಕ ಸಿಐಡಿ ಅಧಿಕಾರಿಗಳು 483 ಪುಟಗಳ ಚಾರ್ಜ್​ ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​​ ಶೀಟ್​ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್​ ಹುಬ್ಬಳ್ಳಿಯ ಪಿಸಿ ಜಾಬಿನ್​ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿದ್ದರು. ನಂತರ ಪ್ರೀತಿಸಲು ಆರಂಭಿಸಿದ್ದರು. 2024ರ ಮಾರ್ಚ್​ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಮನಸ್ತಾಪ ಉಂಟಾಯಿತು. ಬಳಿಕ ನೇಹಾ ಆರೋಪಿ ಫಯಾಜ್​ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು.

ಇದರಿಂದ ಫಯಾಜ್ ಹತಾಶಗೊಂಡು ನೇಹಾಳನ್ನು ಕೊಲೆ ಮಾಡಬೇಕೆಂದು ನಿರ್ಧಿರಿಸಿದ್ದನು. ಹೀಗಾಗಿ, ಏಪ್ರಿಲ್​ 18 ರಂದು ಕೊಲೆ ಮಾಡುವ ಮೂರು ದಿನಗಳ ಮೊದಲು ಏಪ್ರಿಲ್​ 15 ರಂದು ಧಾರವಾಡದ ಆರ್ಯ ಸೂಪರ್​ ಬಜಾರ್​ನಲ್ಲಿ ಚಾಕು ಖರೀದಿಸಿದ್ದಾನೆ. ಫಯಾಜ್​ ಚಾಕು ಖರೀದಿಸಿದ ಸಿಸಿಟಿವಿ ದೃಶ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ. ನಂತರ ಬಳಿಕ ನ್ಯೂ ಸಾಯಿ ಗಾರ್ಮೆಂಟ್​ನಲ್ಲಿ ಟೋಪಿ ಕೆಂಪು ಟೋಪಿ ಖರೀದಿಸಿದ್ದಾನೆ.

ಬಳಿಕ ಏಪ್ರಿಲ್​ 18 ರಂದು ಫಯಾಜ್​ ಬಿವಿಬಿ ಕಾಲೇಜಿಗೆ ಬಂದು ನೇಹಾ ಎದುರು “ಇಷ್ಟು ದಿನ ಪ್ರೀತಿ ಮಾಡಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈ ನಿನ್ನನ್ನು ಬಿಡುವುದಿಲ್ಲವೆಂದು ಸಂಜೆ 4:40ರ ಸುಮಾರಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿ, ಚಾಕು ಅಲ್ಲೆ ಬಿಟ್ಟು ಓಡಿ ಹೋಗಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ​

ಆರೋಪಿ ಫಯಾಜ್​ ವಿರುದ್ಧ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ) 341 (ಒಂದು ತಿಂಗಳು ಜೈಲು ಶಿಕ್ಷೆ) ಹಾಗೂ 506 (ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.ಹುಬ್ಬಳ್ಳಿ, ಜುಲೈ 10: ಹುಬ್ಬಳ್ಳಿ-ಧಾರವಾಡ  ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ  ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ ಜಿಹಾದ್ (Love Jihad)​ ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ. ಮದುವೆಗೆ ನಿರಾಕರಿಸಿದಕ್ಕೆ ನೇಹಾಳನ್ನು ಫಯಾಜ್​ ಕೊಲೆ ಮಾಡಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.​

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago