ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರೀತಿಸಲು ನಿರಾಕರಿಸಿದ ನೇಹಾಳನ್ನು ಕೆಎಲ್‌ಇ ಬಿವಿಬಿ ಕಾಲೇಜು ಆವರಣದಲ್ಲೇ ಹಾಡಹಗಲೇ ಫಯಾಜ್ 9 ಬಾರಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಕೊಲೆ ಮಾಡಿ ಪರಾರಿಯಾಗಿದ್ದ ವಿದ್ಯಾರ್ಥ ವಿದ್ಯಾರ್ಥಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು.
ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ (24) ಕೆಎಲ್‌ಇ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದಳು. ಆರೋಫಿ ಫಯಾಜ್ ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಇಬ್ಬರು ಬಿಸಿಎ ಓದುವಾಗ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು. ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಮೂಲದವನಾಗಿದ್ದಾನೆ.
ಗುರುವಾರ ಸಂಜೆ ತರಗತಿ ಮುಗಿಸಿಕೊಂಡು ನೇಹಾ ಮನೆಗೆ ಹಿಂತಿರುಗಿತ್ತಿದ್ದಾಗ ಕಾಲೇಜು ಕ್ಯಾಂಪಸ್ ಗೆ ಫಯಾಜ್ ಮಾಸ್ಕ್ ಹಾಕಿಕೊಂಡು ಬಂದು ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿಗೆ ಬರೋಬ್ಬರಿ 9 ಬಾರಿ ಇರಿದು ಚಾಕು ಅಲ್ಲೇ ಎಸೆದು ಪರಾರಿಯಾಗಿದ್ದಾನೆ. ತಕ್ಷಣ ಪೊಲೀಸರು ಅಲರ್ಟ್ ಆಗಿದ್ದು, ಕಿಮ್ಸ್ ಹಿಂಬದಿಯಲ್ಲಿ ಅವಿತುಕೊಂಡಿದ್ದ ಫಯಾಜ್‌ನನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…