ಹುಬ್ಬಳ್ಳಿ,: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನೇಹಾ ಕುಟುಂಬವನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಪ್ರಕರಣವನ್ನು ಈಗಾಗಲೇ ಸಿಐಡಿಗೆ ಕೊಟ್ಟಿದ್ದೇವೆ. ಇದಕ್ಕಾಗಿ ವಿಶೇಷ ನ್ಯಾಯಾಲಯ ಮಾಡಬೇಕು. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು. ಆರೋಪಿಗೆ ಘೋರ ಶಿಕ್ಷೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು.
ಬಿಜೆಪಿಯವರು ಯಾವುದಾದರೂ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದಾರಾ..? ಅಧಿಕಾರದಲ್ಲಿ ಇದ್ದಾಗ ಒಂದು ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..? ನಾನು ಅಧಿಕಾರದಲ್ಲಿರುವಾಗ ಅನೇಕ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ಇದನ್ನ ಬಿಜೆಪಿ ರಾಕೀಯವಾಗಿ ಬಳಸುವುದು ಸರಿಯಲ್ಲಾ ಎಂದು ಸಿಎಂ ಕಿಡಿಕಾರಿದರು.
ಕಾಂಗ್ರೆಸ್ ಜನರ ಆಸ್ತಿ ಕಿತ್ತುಕೊಳ್ಳುತ್ತಿದೆ ಎಂಬ ಮೋದಿ ಹೇಳಿಕೆ ಬಗ್ಗೆ ಮಾತನಾಡಿ, 15 ಲಕ್ಷ ಅಕೌಂಟ್‍ಗೆ ಹಾಕಿದ್ದಾರಾ.? 2 ಕೋಟಿ ಉದ್ಯೋಗ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ..? ಡಾಲರ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿದ್ರಾ ಎಂದು ಸಿಎಂ ತಿರುಗೇಟು ನೀಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…