ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು : ಫಯಾಜ್ ತಾಯಿ – Vishwanews24

Featured, ರಾಜ್ಯ ನ್ಯೂಸ್

ನನ್ನ‌ಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ : ಫಯಾಜ್ ತಾಯಿ

ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನ‌ಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ. ಮೊದಲು ಅವನು ಬಹಳ ಓದಿನಲ್ಲಿ ಜಾಣನಿದ್ದ. ಅವಳೇ ಇವನಿಗೆ ಪ್ರಪೋಸ್ ಮಾಡಿದ್ದಳು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ ಹೇಳಿದ್ದೆ ಎಂದಿದ್ದಾರೆ.

ಕೊಲೆಗಾರನನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ರಚಿತಾ ರಾಮ್‌ – Vishwanews24

ಈ ಘಟನೆಯಿಂದ ಅವನಿಗೆ ತಕ್ಕ ಶಿಕ್ಷೆಯಾಗಬೇಕು. ಕೆಎಎಸ್ ಆಫೀಸರ್ ಆಗಬೇಕು ಎಂದು ನಾನು ಕನಸು ಕಂಡಿದ್ದೆ. ಆದರೆ ಈ ರೀತಿಯಾಗಿದ್ದು ನೋಡಿ ಬಹಳ ಸಂಕಟ ಆಗುತ್ತಿದೆ ಎಂದು ದುಃಖ ತೋಡಿಕೊಂಡಿದ್ದಾರೆ.

ನೇಹಾ ಸಹ ತುಂಬಾ ಒಳ್ಳೆಯ ಹುಡುಗಿ. ಅವರಿಬ್ಬರೂ ಮದುವೆ ಆಗಬೇಕು ಎಂದಿದ್ದರು. ಹಾಗಂತ ಸಡಿಲಿಕೆ ಬೇಡ ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ನೂರಾರು ಮಕ್ಕಳಿಗೆ ನಾನು ಶಿಕ್ಷಣ ಕೊಡ್ತೀನಿ. ಆದರೆ ಇವನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಫಯಾಜ್ ತಾಯಿ ಮಮ್ತಾಜ್ ಆಗ್ರಹಿಸಿದ್ದಾರೆ.

ದೇಶದ ಸಂವಿಧಾನ ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ  :ಸಿಎಂ ಸಿದ್ದರಾಮಯ್ಯ – Vishwanews24

Leave a Reply