ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಘೋಷಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್, ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಜೆವಾರ್‌ನಲ್ಲಿ ನಿರ್ಮಾಣವಾಗಿರುವ ಈ ವಿಮಾನ ನಿಲ್ದಾಣವನ್ನು ಉತ್ತರ ಪ್ರದೇಶಕ್ಕೆ ಪ್ರಧಾನಿ ನೀಡಿದ ಮಹತ್ವದ ಕೊಡುಗೆ ಎಂದು ಅವರು ಬಣ್ಣಿಸಿದರು.
“ಜೆವಾರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶದ ಸಚಿವ ಸಂಪುಟ ಕೃತಜ್ಞತೆ ಸಲ್ಲಿಸುತ್ತದೆ. ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ನೋಯ್ಡಾ-ಜೆವಾರ್’ ಎಂದು ಹೆಸರಿಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ,” ಎಂದು ಮುಖ್ಯಮಂತ್ರಿ ಹೇಳಿದರು.
ಈ ವಿಮಾನ ನಿಲ್ದಾಣವು ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶದ ಅತಿದೊಡ್ಡ ವಿಮಾನ ನಿಲ್ದಾಣವಾಗಿ ಬೆಳೆಯುವುದರ ಜೊತೆಗೆ ದೇಶದ ಪ್ರಮುಖ ವಾಯುಯಾನ ಕೇಂದ್ರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮಾರ್ಚ್ 28ರಂದು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಜೂನ್ 15ರಂದು ಲಕ್ಕೋದಿಂದ ಬಂದ ಇಂಡಿಗೋ ವಿಮಾನವು ಇಲ್ಲಿ ಮೊದಲ ಬಾರಿಗೆ ಇಳಿಯುವ ಮೂಲಕ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರಕ್ಕೆ ಚಾಲನೆ ದೊರೆಯಿತು.
ಸ್ವಿಟರ್‌ಲ್ಯಾಂಡ್‌ನ ಜ್ಯೂರಿಚ್ ಏರ್‌ಪೋರ್ಟ್ ಇಂಟರ್‌ನ್ಯಾಷನಲ್ ಎಜಿ ಸಂಸ್ಥೆಯ ಅಂಗಸಂಸ್ಥೆಯಾದ ಯಮುನಾ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಈ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಿದೆ. ಉತ್ತರ ಪ್ರದೇಶ ಸರ್ಕಾರದ ಪರವಾಗಿ ನೋಯ್ಡಾ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಯೋಜನೆಯ ಅನುಷ್ಠಾನ ಸಂಸ್ಥೆಯಾಗಿ ಕಾರ್ಯನಿರ್ವಹಿಸಿದೆ.
11,282 ಕೋಟಿ ವೆಚ್ಚದಲ್ಲಿ ನಿರ್ಮಾಣ
ವಿಮಾನ ನಿಲ್ದಾಣದ ಮೊದಲ ಹಂತವನ್ನು 711,282 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಆರಂಭದಲ್ಲಿ ವರ್ಷಕ್ಕೆ 1.2 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಮುಂದಿನ ಕೆಲವು ವರ್ಷಗಳಲ್ಲಿ ಈ ಸಾಮರ್ಥ್ಯವನ್ನು ವರ್ಷಕ್ಕೆ 7 ಕೋಟಿ ಪ್ರಯಾಣಿಕರಿಗೆ ಹೆಚ್ಚಿಸುವ ಯೋಜನೆಯಿದೆ. ವಿಶಾಲವಾದ ವಿಮಾನಗಳ (Wide-body aircraft) ಕಾರ್ಯಾಚರಣೆಗೆ ಅನುಕೂಲವಾಗುವಂತೆ 3,900 ಮೀಟರ್ ಉದ್ದದ ರನ್‌ವೇ ಮತ್ತು ಆಧುನಿಕ ನ್ಯಾವಿಗೇಷನ್ ವ್ಯವಸ್ಥೆಯನ್ನು ಇದು ಹೊಂದಿದೆ.
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…
ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ ಚೆನ್ನೈ,: ರಾಜ್ಯದ ಎಲ್ಲಾ ಸರ್ಕಾರಿ…