ಹೊಸದಿಲ್ಲಿ : ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಭಾರೀ ಹಿನ್ನಡೆ ಅನುಭವಿಸಿದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆ ಮೊದಲಿನಿಂದಲೂ ನ್ಯಾಯಯುತವಾಗಿರಲಿಲ್ಲ ಎಂದು ಹೇಳಿದರು.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಮಹಾಘಟಬಂಧನ್‌ಗೆ ಬೆಂಬಲಿಸಿದ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ವಿರೋಧ ಪಕ್ಷಗಳು ತಮ್ಮ ಹೋರಾಟವನ್ನು ಇನ್ನಷ್ಟು ಬಲಪಡಿಸುತ್ತವೆ ಎಂದು ಹೇಳಿದರು.
“ಮಹಾಘಟಬಂಧನ್ ಮೇಲೆ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಬಿಹಾರದಲ್ಲಿನ ಈ ಫಲಿತಾಂಶ ನಿಜಕ್ಕೂ ಆಶ್ಚರ್ಯಕರವಾಗಿದೆ. ಮೊದಲಿನಿಂದಲೇ ನ್ಯಾಯಸಮ್ಮತವಾಗಿರದ ಚುನಾವಣೆಯಲ್ಲಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ಹೇಳಿದರು.
ಬಿಹಾರ ತೀರ್ಪನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಹಿನ್ನಡೆ ಎಂದು ಕರೆದ ರಾಹುಲ್ ಗಾಂಧಿ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ಫಲಿತಾಂಶಗಳ ಬಗ್ಗೆ ಆಳವಾಗಿ ಪರಿಶೀಲನೆ ನಡೆಸುತ್ತದೆ ಎಂದು ಹೇಳಿದರು.
ಈ ಹೋರಾಟ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟ ಈ ಫಲಿತಾಂಶಗಳನ್ನು ಆಳವಾಗಿ ಪರಿಶೀಲಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ತಮ್ಮ ಪ್ರಯತ್ನಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುತ್ತದೆ ಎಂದು ಹೇಳಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…