Featured

ನ್ಯಾಯಾಲಯದ ಆವರಣದಲ್ಲಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಸರ್ಕಾರಿ ಅಭಿಯೋಜಕಿ -Vishwanews24

ತುಮಕೂರು : ಸರ್ಕಾರಿ ಅಭಿಯೋಜಕಿಯೊಬ್ಬರು 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಸರ್ಕಾರಿ ಅಭಿಯೋಜಕಿ ಪೂರ್ಣಿಮಾ ಜಿ. ಅವರು ತಿಪಟೂರು ನ್ಯಾಯಾಲಯದ ಆವರಣದಲ್ಲಿ ಕಕ್ಷಿದಾರರಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳು ಹಿಡಿದಿದ್ದಾರೆ.

ದೂರುದಾರ ಕೆಇಬಿ ಇಂಜಿನಿಯರ್ ಗುರುಬಸವಸ್ವಾಮಿ ಎಂಬುವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, 2015 ರಲ್ಲಿ ವಿದ್ಯುತ್ ಕಂಬ ವೃದ್ಧೆ ಮೇಲೆ ಬಿದ್ದು ಕಾಲು ತುಂಡಾಗಿದ್ದ ಪ್ರಕರಣ ಸಂಬಂಧ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಜಿ ವಕಾಲತ್ತು ವಹಿಸಿದ್ದರು. ಆದರೆ ಪ್ರಕರಣ ಸೋಮವಾರ ನ್ಯಾಯಾಲಯದಲ್ಲಿ ಖುಲಾಸೆಗೊಂಡಿತ್ತು.

ಈ ಬಗ್ಗೆ ಮೇಲ್ಮನವಿ ಸಲ್ಲಿಸಲು 40 ಸಾವಿರ ರೂ. ಲಂಚಕ್ಕಾಗಿ ಕೆಇಬಿ ಇಂಜಿನಿಯರ್ ಗುರುಬಸವಸ್ವಾಮಿ ಅವರ ಬಳಿ ಬೇಡಿಕೆ ಇಟ್ಟಿದ್ದರು. 20 ಸಾವಿರ ಅಕೌಂಟ್ ಮೂಲಕ ಹಣ ಪಡೆದಿದ್ದ ಅವರು, ಉಳಿದ 20 ಸಾವಿರ ರೂ.ನೇರವಾಗಿ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪ್ರಾಸಿಕ್ಯೂಟರ್ ಕಚೇರಿಯಲ್ಲೇ ರಾತ್ರಿ 10.30 ರ ವರೆಗೆ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

14 minutes ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

33 minutes ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago