Featured

ನ್ಯಾಯ ಸಿಗುವ ತನಕ ಪ್ರತಿಭಟನೆ: ನಿರ್ಮಾಪಕ ಎನ್.ಕುಮಾರ್ – Vishwanews24

ನ್ಯಾಯ ಸಿಗುವ ತನಕ ಪ್ರತಿಭಟನೆ- ನಿರ್ಮಾಪಕ ಎನ್.ಕುಮಾರ್

ಕಿಚ್ಚ ಸುದೀಪ್ -ನಿರ್ಮಾಪಕ ಎನ್.ಕುಮಾರ್ ನಡುವೆ ಮುಂದುವರೆದ ಜಟಾಪಟಿ ಮುಂದುವರೆದಿದೆ. ಹಣ ನಡೆದು, ಕಾಲ್‌ಶೀಟ್ ನೀಡಿಲ್ಲ ಎಂದು ಸುದೀಪ್ ವಿರುದ್ಧ ನಿರ್ಮಾಪಕ ಕುಮಾರ್ ಆರೋಪಿಸಿದ್ದರು.

ಈ ವಿಚಾರಕ್ಕೆ ಕಿಚ್ಚ ಸುದೀಪ್ ಇದೆಲ್ಲವನ್ನು ನ್ಯಾಯಾಲಯದಲ್ಲಿಯೇ ನೋಡಿಕೊಳ್ಳುತ್ತೇವೆ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ನಿರ್ಮಾಪಕ ಕುಮಾರ್ ಫಿಲ್ಮ್ ಚೆಂಬರ್ ಮುಂದೆ ಧರಣಿ ಕೂತಿದ್ದಾರೆ. ನ್ಯಾಯ ಸಿಗುವ ತನಕ ಫಿಲ್ಮ್ ಚೆಂಬರ್ ಮುಂದೆ ಪ್ರತಿಭಟನೆ ಮಾಡ್ತೀವಿ ಅಂತಾ ನಿರ್ಮಾಪಕ ಕುಮಾರ್ ಮಾತನಾಡಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ನಿರ್ಮಾಪಕ ಕುಮಾರ್, ಎಲ್ಲರಿಗೂ ಗೊತ್ತು ನಂಗೆ ಆಗಿರುವ ಸಮಸ್ಯೆ. ಫಿಲ್ಮ್ ಚೆಂಬರ್ ಚಿತ್ರರಂಗಕ್ಕೆ ಒಂದು ಮನೆ ಇದ್ದ ಹಾಗೆ. ಹೀಗಾಗಿ ಇಲ್ಲಿನೇ ಬಗೆಹರಿಸಿಕೊಳ್ಳಲು ಬಂದಿದ್ದೇನೆ. ಸುದೀಪ್ ಅವರ ಬಗ್ಗೆ ಎಲ್ಲಿಯೂ ಕೆಟ್ಟದಾಗಿ ಮಾತನಾಡಿಲ್ಲ. ನಮಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂಬುದಷ್ಟೇ ಹೇಳಿದ್ದೀನಿ. ವಾಣಿಜ್ಯ ಮಂಡಳಿಯಲ್ಲಿ ಬಗೆಹರಿಸಿಕೊಳ್ಳುವುದು ನನ್ನ ಉದ್ದೇಶ. ಸಮಸ್ಯೆ ಬಗೆಹರಿಸಿಕೊಳ್ಳುವ ತನಕ ಇಲ್ಲಿಯೇ ಧರಣಿ ಕುಳಿತುಕೊಳ್ಳುತ್ತೇನೆ.

ನಾನು ಯಾರ ಸಹಾಯವನ್ನು ಕೇಳಿಲ್ಲ. ನಮ್ಮದು ಏನಿದೆ ಅದನ್ನ ಕ್ಲಿಯರ್ ಮಾಡಿದ್ರೆ ಸಾಕು. ನಾವೂ ನಿರ್ಮಾಪಕರು, ಸಾಕಷ್ಟು ಜನರನ್ನು ಬೆಳೆಸಿದ್ದೀವಿ. ಸಭೆಗೆ ಬರಲಿ, ಸಭೆಯ ಮುಂದೆ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ. ಯಾರಿಗೂ ಅಗೌರವ ಆಗಬಾರದು, ಗೌರವ ಉಳಿಯಬೇಕು. ನನಗೆ ತೊಂದರೆಯಾದಾಗ ನಾನು ಯಾರ ಮುಖಾಂತರ ಕೇಳಬೇಕು. ಮಾಧ್ಯಮದವರ ಮುಂದೆಯೇ ಕೇಳಬೇಕು. ದಾಖಲೆಗಳು ಖಂಡಿತ ಇದೆ ಕೊಡ್ತೀನಿ.

ರಾಜಿ ಸಂಧಾನಕ್ಕೆ ನಾವೂ ತಯಾರಿದ್ದೀವಿ. ಅವರು ಕರೆಯಬೇಕು, ಆದರೆ ನಾವೇ ಕರೆಯುತ್ತೀದ್ದೀವಿ. ಪ್ರೀತಿಯಿಂದ ನಡೆದರೆ ಮಾತ್ರ ವ್ಯವಹಾರ. ಯಾರನ್ನು, ಯಾವುದಕ್ಕೂ ಬಲವಂತ ಮಾಡುವುದಕ್ಕೆ ಆಗಲ್ಲ. ನಮ್ಮಲ್ಲಿರುವ ಹಿರಿಯರು ಅವರಿಗೆ ಮಾರ್ಗದರ್ಶನ ನೀಡಬೇಕು. ಶಿವಣ್ಣ ಭೇಟಿಗೆ ನಮ್ಮ ಅಧ್ಯಕ್ಷರು ಬಂದ ಮೇಲೆ ನಿರ್ಧಾರ ಮಾಡುತ್ತೇವೆ. ಈ ವೇಳೆ ಸೂರಪ್ಪ ಬಾಬು ಹಿಂದೆ ನಿಂತು ಮಾಡಿಸುತ್ತಿರುವ ವಿಚಾರ ಸುಳ್ಳು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago