Featured

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಕೇನ್ ವಿಲಿಯಮ್ಸನ್ – Vishwanews24

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಕೇನ್ ವಿಲಿಯಮ್ಸನ್

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್  ಟೆಸ್ಟ್ ತಂಡದ ನಾಯಕತ್ವಕ್ಕೆ ಹಠಾತ್ ಗುಡ್‌ಬೈ ಹೇಳಿದ್ದಾರೆ.

ಇದರಿಂದ ನ್ಯೂಜಿಲೆಂಡ್ ಟೆಸ್ಟ್ ತಂಡದ  ನಾಯಕತ್ವಕ್ಕೆ ಹಿರಿಯ ವೇಗಿ ಟಿಮ್ ಸೌಥಿ  ಅವರನ್ನು ನೇಮಿಸಿದೆ. ಟಾಮ್ ಲ್ಯಾಥಮ್  ಅವರನ್ನ ಟೆಸ್ಟ್ ಉಪನಾಯಕನನ್ನಾಗಿ ಮಾಡಿದೆ.

ಕೇನ್ ವಿಲಿಯಮ್ಸನ್ ಈವರೆಗೆ ಮುನ್ನಡೆಸಿದ ಅಂತಾರಾಷ್ಟ್ರೀಯ 38 ಟೆಸ್ಟ್ ಪಂದ್ಯಗಳ ಪೈಕಿ 22 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 10ರಲ್ಲಿ ಸೋಲು ಕಂಡಿದೆ. ಇನ್ನುಳಿದ 8 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 2021ರಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ, ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು (Team India) ಮಣಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಶೇ.44 ರಷ್ಟು ಯಶಸ್ವಿಯಾಗಿರುವ ಕೇನ್ ವಿಲಿಯಮ್ಸನ್ ಟೆಸ್ಟ್‌ ಯಶಸ್ವಿನಾಯಕ ಎನ್ನಿಸಿಕೊಂಡಿದ್ದಾರೆ. 216ರಲ್ಲಿ ಬ್ರೆಂಡನ್ ಮೆಕಲಮ್ ಟೆಸ್ಟ್ ತಂಡದ ನಾಯಕರಾಗಿದ್ದರು.

ಈ ಕುರಿತು ಮಾತನಾಡಿರುವ ಕೇನ್, `ಇದು ನನ್ನ ವೃತ್ತಿ ಜೀವನದ ಅತ್ಯಂತ ಮಹತ್ವದ ಹಂತವಾಗಿದೆ. ಇನ್ನುಮುಂದೆ ಮೈದಾನದ ಹೊರಗೂ ನನ್ನ ಕಾರ್ಯಭಾರ ಜವಾಬ್ದಾರಿ ಹೆಚ್ಚಾಗಲಿದೆ. ಹಾಗಾಗಿ ಈ ನಿರ್ಧಾರ ಸೂಕ್ತವೆನ್ನಿಸಿದೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕ, ವೈಟ್ ಬಾಲ್ ತಂಡಗಳ ನಾಯಕತ್ವದಲ್ಲಿ ಮುಂದುವರಿಯುತ್ತೇನೆ ಹಾಗೂ ಮುಂದಿನ ಎರಡು ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುತ್ತೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

11 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

11 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

12 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

12 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

12 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

12 hours ago