ವೆಲ್ಲಿಂಗ್ಟನ್: ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟೆಸ್ಟ್ ತಂಡದ ನಾಯಕತ್ವಕ್ಕೆ ಹಠಾತ್ ಗುಡ್‌ಬೈ ಹೇಳಿದ್ದಾರೆ.
ಇದರಿಂದ ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಹಿರಿಯ ವೇಗಿ ಟಿಮ್ ಸೌಥಿ ಅವರನ್ನು ನೇಮಿಸಿದೆ. ಟಾಮ್ ಲ್ಯಾಥಮ್ ಅವರನ್ನ ಟೆಸ್ಟ್ ಉಪನಾಯಕನನ್ನಾಗಿ ಮಾಡಿದೆ.
ಕೇನ್ ವಿಲಿಯಮ್ಸನ್ ಈವರೆಗೆ ಮುನ್ನಡೆಸಿದ ಅಂತಾರಾಷ್ಟ್ರೀಯ 38 ಟೆಸ್ಟ್ ಪಂದ್ಯಗಳ ಪೈಕಿ 22 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 10ರಲ್ಲಿ ಸೋಲು ಕಂಡಿದೆ. ಇನ್ನುಳಿದ 8 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 2021ರಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ, ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು (Team India) ಮಣಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಶೇ.44 ರಷ್ಟು ಯಶಸ್ವಿಯಾಗಿರುವ ಕೇನ್ ವಿಲಿಯಮ್ಸನ್ ಟೆಸ್ಟ್ ಯಶಸ್ವಿನಾಯಕ ಎನ್ನಿಸಿಕೊಂಡಿದ್ದಾರೆ. 216ರಲ್ಲಿ ಬ್ರೆಂಡನ್ ಮೆಕಲಮ್ ಟೆಸ್ಟ್ ತಂಡದ ನಾಯಕರಾಗಿದ್ದರು.
ಈ ಕುರಿತು ಮಾತನಾಡಿರುವ ಕೇನ್, `ಇದು ನನ್ನ ವೃತ್ತಿ ಜೀವನದ ಅತ್ಯಂತ ಮಹತ್ವದ ಹಂತವಾಗಿದೆ. ಇನ್ನುಮುಂದೆ ಮೈದಾನದ ಹೊರಗೂ ನನ್ನ ಕಾರ್ಯಭಾರ ಜವಾಬ್ದಾರಿ ಹೆಚ್ಚಾಗಲಿದೆ. ಹಾಗಾಗಿ ಈ ನಿರ್ಧಾರ ಸೂಕ್ತವೆನ್ನಿಸಿದೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕ, ವೈಟ್ ಬಾಲ್ ತಂಡಗಳ ನಾಯಕತ್ವದಲ್ಲಿ ಮುಂದುವರಿಯುತ್ತೇನೆ ಹಾಗೂ ಮುಂದಿನ ಎರಡು ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುತ್ತೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…