Featured

ನ್ಯೂಯಾರ್ಕ್‌ನ ಮೇಯರ್‌ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ – vishwanews24

ನ್ಯೂಯಾರ್ಕ್‌ನ ಮೇಯರ್‌ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ

ವಾಷಿಂಗ್ಟನ್‌/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್  ಆಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಟ್ರಂಪ್‌ ಅವರ ವ್ಯಾಪಾರ ಯುದ್ಧದ ನಡುವೆಯೂ ಫಸ್ಟ್‌ ಟೈಂ ಭಾರತೀಯ-ಅಮೆರಿಕನ್ ಮುಸ್ಲಿಂ  ಒಬ್ಬರು ಮೇಯರ್‌ ಆಗಿ ಆಯ್ಕೆಯಾಗಿರುವುದು ಐತಿಹಾಸಿಕ ಗೆಲುವಾಗಿದೆ.

ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷದ ಪ್ರಮುಖ ಅಭ್ಯರ್ಥಿ ಮಮ್ದಾನಿ ಚುನಾವಣೆಯಲ್ಲಿ ತಮ್ಮ ಪ್ರಾಬಲ್ಯ ಉಳಿಸಿಕೊಳ್ಳುವಲ್ಲಿ ಉಶಸ್ವಿಯಾಗಿದ್ದಾರೆ. ಸ್ವತಂತ್ರ ಅಭ್ಯರ್ಥಿಯೂ ಆಗಿರುವ ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಮತ್ತು ರಿಪಬ್ಲಿಕನ್ ಪಕ್ಷದ ಕರ್ಟಿಸ್ ಸ್ಲಿವಾ ಅವರನ್ನು ಸೋಲಿಸಿ ಇತಿಹಾಸ ನಿರ್ಮಿಸಿದ್ದಾರೆ.

ಈ ಗೆಲುವಿನೊಂದಿಗೆ ಮಮ್ದಾನಿ ನ್ಯೂಯಾರ್ಕ್ ನಗರದ ಮೊದಲ ಭಾರತೀಯ-ಅಮೆರಿಕನ್‌ ಮುಸ್ಲಿಂ ಮೇಯರ್, ದಕ್ಷಿಣ ಏಷ್ಯಾ ಮೂಲದ ಮೊದಲ ವ್ಯಕ್ತಿ ಹಾಗೂ ಆಫ್ರಿಕಾದಲ್ಲಿ ಜನಿಸಿದ ಮೊದಲ ಮೇಯರ್ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

2026ರ ಜನವರಿ 1 ರಂದು ವಿಶ್ವದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಅಮೆರಿಕದ ನ್ಯೂಯಾರ್ಕ್‌ ನಗರದ ಮೇಯರ್‌ ಆಗಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇವಲ 34ನೇ ವರ್ಷಕ್ಕೆ ಈ ಹುದ್ದೆಗೇರುವ ಮೂಲಕ ಅವರು ಕಳೆದ ಒಂದು ಶತಮಾನದಲ್ಲೇ ಈ ಹುದ್ದೆಗೇರಿದ ಅತ್ಯಂತ ಕಿರಿಯ ವಯಸ್ಸಿಗ ಎಂಬ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago