Featured

ನ್ಯೂಯಾರ್ಕ್‌ : ಪುಲಿಟ್ಜರ್‌ ಪ್ರಶಸ್ತಿಗೆ ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಆಯ್ಕೆ – Vishwanews24

ನ್ಯೂಯಾರ್ಕ್‌ : ಪುಲಿಟ್ಜರ್‌ ಪ್ರಶಸ್ತಿಗೆ ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಆಯ್ಕೆ – Vishwanews24

ನ್ಯೂಯಾರ್ಕ್‌, : ಮುಸ್ಲಿಮರನ್ನು ಸೆರೆಯಲ್ಲಿಡುವ ಸಲುವಾಗಿ ಷಿನ್ಜಿಯಾಂಗ್‌‌ ಪ್ರಾಂತ್ಯದಲ್ಲಿ ಬೃಹತ್ ಜೈಲುಗಳನ್ನು ನಿರ್ಮಾಣ ಮಾಡಿರುವ ಬಗ್ಗೆ ತನಿಖಾ ವರದಿ ಪ್ರಕಟಿಸುವ ಮುಖೇನ ಚೀನಾದ ಕ್ರಮವನ್ನು ವಿಶ್ವಕ್ಕೆ ತಿಳಿಸಿದ ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಅವರು ಈ ಬಾರಿಯ ಪ್ರತಿಷ್ಠಿತ ‘ಪುಲಿಟ್ಜರ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದ ಈ ಅತ್ಯುನ್ನತ ಪ್ರಶಸ್ತಿಗೆ ಮೇಘಾ ರಾಜಗೋಪಾಲನ್ ಸೇರಿ ಮೂವರು ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಮೇಘಾ ರಾಜಗೋಪಾಲನ್‌‌ ಅವರು ಬಝ್‌ಫೀಡ್‌ ನ್ಯೂಸ್‌‘ ಎಂಬ ಸುದ್ದಿಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೇಘಾ ರಾಜಗೋಪಾಲನ್‌ ಅವರು ಷಿನ್ಜಿಯಾಂಗ್‌‌ ಪ್ರಾಂತ್ಯದಲ್ಲಿ ಬೃಹತ್ ಜೈಲುಗಳನ್ನು ನಿರ್ಮಾಣ ಮಾಡಿ ಹಾಗೂ ಸಾಮೂಹಿಕ ತಡೆ ಶಿಬಿರಗಳನ್ನು ಮಾಡಿ ಅದರಲ್ಲಿ ಮಕ್ಕಳು ಹಾಗೂ ಲಕ್ಷಾಂತರ ಮುಸ್ಲಿಮರನ್ನು ಬಂಧಿಸಿಟ್ಟಿದ್ದ ವಿಚಾರದ ಬಗ್ಗೆ ತಮ್ಮ ವಿಶಿಷ್ಟವಾದ ರೀತಿಯ ತನಿಖಾ ವರದಿಗಳ ಮೂಲಕ ತಿಳಿಸಿದ್ದರು. ‌ ಇವರ ಷಿನ್‌ಜಿಯಾಂಗ್‌ ಪ್ರಾಂತ್ಯದ ಸುದ್ದಿಗಳ ಸರಣಿಗಾಗಿ ಮೇಘಾ ಅವರು ಅಂತರಾಷ್ಟ್ರೀಯ ವರದಿವಿಭಾಗದಲ್ಲಿ ಪುಲಿಟ್ಜೆರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಟಂಪಾ ಬೇ ಟೈಮ್ಸ್‌ನ ತನಿಖಾ ವರದಿಗಾರ ನೀಲ್ ಬೇಡಿ ಅವರು ಸ್ಥಳೀಯ ವರದಿಗಾಗಿ ಪುಲಿಟ್ಜರ್‌ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago