ನ.1ರಂದು ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ನ.1ರಂದು ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:ಸಿಎಂ ಬೊಮ್ಮಾಯಿ

ಬೆಂಗಳೂರು: ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಕಪ್ಪು ಕುರ್ತಾ, ಪೇಟ ಧರಿಸಿ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ ಮಲ್ಲಿಕಾರ್ಜುನ ಖರ್ಗೆ – Vishwanews24

 

Leave a Reply