ರಾಜ್ಯ ನ್ಯೂಸ್

ನ.1ರಿಂದ ರಾಜ್ಯಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಅಭಿಯಾನ : ಸುನೀಲ್‍ ಕುಮಾರ್ – vishwanews24

ನ.1ರಿಂದ ರಾಜ್ಯಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಅಭಿಯಾನ : ಸುನೀಲ್‍ ಕುಮಾರ್

ಬೆಂಗಳೂರು: ಯುವ ಸಮುದಾಯಕ್ಕೆ ಎಸ್‍ಐಆರ್ ಕುರಿತಂತೆ ಸರಿಯಾದ ಮಾಹಿತಿ ನೀಡಿ ಕಾಂಗ್ರೆಸ್ಸಿನ ಅರಾಜಕತೆಯ ಮನಸ್ಥಿತಿಯನ್ನು ಬಯಲು ಮಾಡುವ ಉದ್ದೇಶದಿಂದ ನ.1ರಿಂದ ನ.30ರವರೆಗೆ ಕಾಲೇಜು ವಿದ್ಯಾರ್ಥಿಗಳು, ಯುವಜನರ ನಡುವೆ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಅಭಿಯಾನವನ್ನು ಮಾಡಲಿದ್ದೇವೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ದೇಶದಲ್ಲಿ ಎಸ್‍ಐಆರ್ ವಿಚಾರದ ಮೂಲಕ ಯುವಕರನ್ನು ಸಂಘರ್ಷಕ್ಕೆ ಇಳಿಸುವ ಹಾಗೂ ಯುವಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸವನ್ನು ಕಳೆದ ಕೆಲವು ತಿಂಗಳಿನಿಂದ ನಿರಂತರವಾಗಿ ಮಾಡುತ್ತಿದೆ ಎಂದು ಆಕ್ಷೇಪಿಸಿದರು.

ಯುವಜನರ ನಡುವೆ ದೊಡ್ಡ ಸಂವಾದ ಗೋಷ್ಠಿಗಳನ್ನು ರಾಜ್ಯಾದ್ಯಂತ ನಡೆಸಲಾಗುವುದು ಎಂದು ವಿವರಿಸಿದರು.

ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಯುವಜನರನ್ನು ಕಣ್ಮುಂದೆ ಇಟ್ಟುಕೊಂಡು ಅನೇಕ ಯೋಜನೆಗಳನ್ನು ಮಾಡಿದ್ದಾರೆ. 7 ಐಐಟಿಗಳ ಸ್ಥಾಪನೆ, ತ್ರಿಬಲ್ ಐಐಟಿಗಳನ್ನು 16 ಕಡೆ ಆರಂಭಿಸಲಾಗಿದೆ. 8 ಕಡೆ ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಪ್ರಾರಂಭಿಸಲಾಗಿದೆ. 2014ಕ್ಕೆ ಮೊದಲು ದೇಶದಲ್ಲಿ 387 ವೈದ್ಯಕೀಯ ಕಾಲೇಜುಗಳಿದ್ದವು. 12 ವರ್ಷಗಳಲ್ಲಿ 431 ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಮೋದಿಯವರು ಕೌಶಲ್ಯಾಭಿವೃದ್ಧಿಯ ಹೊಸ ಸಚಿವಾಲಯ ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಸ್ಟಾರ್ಟಪ್ ಸಂಖ್ಯೆಗಳೂ ಹೆಚ್ಚಾಗಿವೆ. 2,12,283 ಸ್ಟಾರ್ಟಪ್‍ಗಳು ಆರಂಭವಾಗಿವೆ. ಈ ಪೈಕಿ 21,601 ಕರ್ನಾಟಕದಲ್ಲೇ ಆರಂಭಗೊಂಡಿವೆ. ಕ್ರೀಡಾ ಕ್ಷೇತ್ರದಲ್ಲಿ ಯುವಜನರಿಗಾಗಿ ಹೊಸ ಯೋಜನೆಗಳನ್ನು ನೀಡಿದ್ದಾರೆ ಎಂದು ಹೇಳಿದರು.

ಆದರೆ, ಕಾಂಗ್ರೆಸ್ ಯುವಜನರ ಮನಸ್ಸನ್ನು ದಾರಿ ತಪ್ಪಿಸುವ ಯತ್ನ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಭಾರತವನ್ನು ಬಾಂಗ್ಲಾ, ಶ್ರೀಲಂಕಾ, ಫ್ರಾನ್ಸ್ ಮಾಡಲು, ಇಲ್ಲಿ ಅರಾಜಕತೆ ಸೃಷ್ಟಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟ ಸರ್ಕಾರದ ಕ್ರಮ ಖಂಡನೀಯ: ಶಾಸಕ ಸುನಿಲ್ ಕುಮಾರ್ – vishwanews24

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟ ಸರ್ಕಾರದ ಕ್ರಮ ಖಂಡನೀಯ: ಶಾಸಕ ಸುನಿಲ್ ಕುಮಾರ್ ಉಡುಪಿ:…

24 hours ago

ಉಡುಪಿ : ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನ ಸಾವು ಪ್ರಕರಣ : ಹಲ್ಲೆ, ಬೆದರಿಕೆ ಹಿನ್ನೆಲೆ ಆತ್ಮಹತ್ಯೆ ಪ್ರಚೋದನೆ ಆರೋಪ !vishwanews24

ಪ್ರೀತಿಸುತ್ತಿದ್ದ ಯುವತಿಯ ಸಹೋದರರು ಹಾಗೂ ಇತರರಿಂದ ಹಲ್ಲೆ ನಡೆಸಿದ ಆರೋಪ.. 11 ಮಂದಿ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ…

24 hours ago

ಬಿಜೆಪಿ ಸರಕಾರವನ್ನು ಉರುಳಿಸಲು ನಡೆಯುತ್ತಿರುವ ಹೋರಾಟ: ಪ್ರಕಾಶ್ ರಾಜ್ – vishwanews24

ಮಂಗಳೂರು: ಎಸ್ ಐಆರ್ ವಿರುದ್ಧ 'ಸಾಮೂಹಿಕ ಜನತಾ ನಡಿಗೆ' ಮೋದಿಯವರೇ, ನೀವು ಹೆಚ್ಚು ದಿನ ಅಧಿಕಾರದಲ್ಲಿರುವುದಿಲ್ಲ; ನಿಮ್ಮ ಪಾಪದ ಕೊಡ…

1 day ago

ಎಸ್‌ಐಟಿಯಿಂದ ಸೌಜನ್ಯ ಪ್ರಕರಣದ ಮರುತನಿಖೆ ಆರಂಭ : ಮೃತದೇಹ ಪತ್ತೆಯಾದ ಜಾಗಕ್ಕೆ ಭೇಟಿ – vishwanews24

ಎಸ್‌ಐಟಿಯಿಂದ ಸೌಜನ್ಯ ಪ್ರಕರಣದ ಮರುತನಿಖೆ ಆರಂಭ; ಧರ್ಮಸ್ಥಳದ ಕಾಡಿಗೆ ಎಂಟ್ರಿ, ಮೃತದೇಹ ಪತ್ತೆಯಾದ ಜಾಗಕ್ಕೆ ಭೇಟಿ ಮಂಗಳೂರು: ಸೌಜನ್ಯ ಅತ್ಯಾಚಾರ…

1 day ago

ತಮಿಳುನಾಡು ಜೈಲಿನಿಂದ ಖೈದಿಗಳು ಪರಾರಿ ಪ್ರಕರಣ: ಹಿರಿಯ ಜೈಲಾಧಿಕಾರಿ ಅಮಾನತು, ಸಿಬ್ಬಂದಿ ವರ್ಗಾವಣೆ : ಸಿಎಂ ವಿಜಯ್ ಆದೇಶ – vishwanews24

ತಮಿಳುನಾಡು ಜೈಲಿನಿಂದ ಖೈದಿಗಳು ಪರಾರಿ ಪ್ರಕರಣ: ಹಿರಿಯ ಜೈಲಾಧಿಕಾರಿ ಅಮಾನತು, ಸಿಬ್ಬಂದಿ ವರ್ಗಾವಣೆ : ಸಿಎಂ ವಿಜಯ್ ಆದೇಶ ಚೆನ್ನೈ:…

1 day ago

ರಾಜ್ಯೋತ್ಸವ ಪಟ್ಟಿಯಿಂದ ಉಡುಪಿಯ ವೈದ್ಯ ಡಾ.ಚಂದ್ರಶೇಖರ್ ಹೆಸರು ಕೈಬಿಟ್ಟಿದಕ್ಕೆ ಸರಕಾರದ ವಿರುದ್ಧ ತೀವ್ರ ಅಸಮಾಧಾನ – vishwanews24

ರಾಜ್ಯೋತ್ಸವ ಪಟ್ಟಿ ತಿದ್ದುಪಡಿ: ಉಡುಪಿಯ ವೈದ್ಯ ಡಾ.ಚಂದ್ರಶೇಖರ್ ಹೆಸರು ಕೈಬಿಟ್ಟಿದಕ್ಕೆ ಸರಕಾರದ ವಿರುದ್ಧ ತೀವ್ರ ಅಸಮಾಧಾನ ಉಡುಪಿ: ಕರ್ನಾಟಕ ಸರಕಾರ…

1 day ago