Featured

ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ – Vishwanews24

ನ.18ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ

ಮಂಗಳೂರು: ‘ಉದ್ಯಮಶೀಲತೆ ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವುದು’ ಎಂಬ ಧೇಯದೊಂದಿಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ‘ಕರಾವಳಿ ಉತ್ಸವ’ ಮೈದಾನದಲ್ಲಿ ನ. 18ರಂದು ಜರಗಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 10ಕ್ಕೆ ಕಾರಕ್ರಮ ಆರಂಭವಾ ಗಲಿದೆ. ಬೆಳಗ್ಗೆ 9ಕ್ಕೆ ‘ಸಹಕಾರ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಕಾರ ಜಾಥಾ’ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್, ಸೌಹಾರ್ದ ಸಹಕಾರಿಗಳು ಹಾಗೂ ಎಲ್ಲ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಸಚಿವರಿಂದ ಉದ್ಘಾಟನೆ ಸಹಕಾರ ಸಪ್ತಾಹವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸುವರು. ರಾಜ್ಯಮಟ್ಟದ ಶೆಟ್ಟಿ ‘ಸಹಕಾರ ರತ್ನ ಪ್ರಶಸ್ತಿಯನ್ನು ಸಚಿವ ವಿ. ಸುನಿಲ್ ಕುಮಾರ್ ಪ್ರದಾನ ಅಧ ಮಾಡಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಅಧ್ಯಕ್ಷತೆ ಪ ವಹಿಸಲಿರುವರು. ಕರ್ನಾಟಕ ರಾಜ್ಯ ಕಳ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಜಿ ಡಾ|ಎಂ.ಎನ್. ರಾಜೇಂದ್ರ ಕುಮಾರ್ ‘ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಶ ಪ್ರದಾನ’ ಮಾಡಲಿರುವರು. ಸಹಕಾರ ಸ ಸಪ್ತಾಹದ ಧ್ವಜಾರೋಹಣವನ್ನು ಪ ಶಾಸಕ ವೇದವ್ಯಾಸ ಡಿ. ಕಾಮತ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಯು.ಟಿ. ಖಾದರ್, ಡಾ| ವೈ, ಭರತ್ ಶೆಟ್ಟಿ ಹಾಗೂ ಮೇಯರ್‌’ ಜಯಾನಂದ ಅಂಚನ್ ಭಾಗವಹಿಸಲಿರುವರು.

ಕ್ಯಾಂಪೋ ಸಂಸೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ದ.ಕ. ಜಿಲ್ಲಾ ಸಹಕಾರಿ ಉತ್ಪಾದಕರ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ದ.ಕ. ಮತ್ತು ಉಡುಪಿ ಜಿಲ್ಲಾ ಸದಾಶಿ ಮೀನುಗಾರರ ಮಹಾಮಂಡಳ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಗೌರವ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್‌.. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‌ ಭಾಗವಹಿಸಲಿರುವರು.

ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌..✴️ ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ – Vishwanews24

ಸಹಕಾರ ರತ್ನ ಪ್ರಶಸ್ತಿ ಪ್ರದಾನ
ಕರ್ನಾಟಕ ಸರಕಾರ ರಾಜ್ಯ ಮಟ್ಟದಲ್ಲಿ ನೀಡುವ ‘ಸಹಕಾರ ರತ್ನ ಪ್ರಶಸ್ತಿಯನ್ನು ಕೊಂಕೋಡಿ ಪದ್ಮನಾಭ, ನಿತ್ಯಾನಂದ ಮುಂಡೋಡಿ ದಂಬೆಕಾನ ಸದಾಶಿವ ರೈ, ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಯಶ್ಪಾಲ್ ಸುವರ್ಣ ಅವರಿಗೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಹಕಾರಿ ರಾಜೇಂದ್ರ ಕುಮಾರ್ ತಿಳಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ ಜಿಲ್ಲಾ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ,_ಬ್ಯಾಂಕಿನ ನಿರ್ದೇಶಕರಾದ ಬಿ. ನಿರಂಜನ್, ಟಿ.ಜಿ. ರಾಜಾರಾಮ್ ಭಟ್, ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ. ಜಯರಾಮ ರೈ, ಶಶಿಕುಮಾರ್ ರೈ ಬಾಲ್ಯೂಟ್ಟು ಭಾಸ್ಕರ್ ಎಸ್. ಕೋಟ್ಯಾನ್, ರಾಜೇಶ್ ರಾವ್, ರಾಜು ಪೂಜಾರಿ, ಅಶೋಕ್ ಕುಮಾರ್ ಶೆಟ್ಟಿ ಸದಾಶಿವ ಉಳ್ಳಾಲ, ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್, ಸಹಾಯಕ ನಿಬಂಧಕ ಸುಧೀರ್ ಕುಮಾರ್‌ ಉಪಸ್ಥಿತರಿದ್ದರು,
ಸಹಕಾರ ಜಾಥಾ
ಎಸ್‌ಸಿಡಿಸಿಸಿ ಬ್ಯಾಂಕಿನ ಆವರಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಹಕಾರಿಗಳು ವಾಹನದ ಮೂಲಕ ಸಹಕಾರ ಜಾಥಾ’ ದಲ್ಲಿ ಭಾಗವಹಿಸಲಿದ್ದು ಸುಮಾರು 900 ಚತುಷ್ಕಕ್ರ ವಾಹನಗಳು ಪಾಲ್ಗೊಳ್ಳಲಿವೆ. ಸಹಕಾರ ಆಂದೋಲನದ ಮೂಲಪುರುಷ ಮೊಳಹಳ್ಳಿ ಶಿವರಾವ್‌ ಅವರನ್ನು ಸ್ಮರಿಸುವ ಹಾಗೂ ಸಹಕಾರ ಚಳವಳಿಯನ್ನು ಪ್ರತಿಬಿಂಬಿಸುವ ಆಕರ್ಷಕ ಟ್ಯಾಬ್ಲೊಗಳು, ಹೊನ್ನಾವರ ಬ್ಯಾಂಡ್ ಸೇರಿದಂತೆ ವಿವಿಧ ಕಲಾ ತಂಡಗಳ ಸಂಯೋಜನೆಯಲ್ಲಿ ಸಹಕಾರ ಜಾಥಾ’ ನಡೆಯಲಿದೆ ಎಂದು ಡಾ| ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

 

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

24 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago