ನ. 18 – 19 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ – vishwanews24
ನ. 18 – 19 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ
ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು ಆಚರಿಸಲು ಉಡುಪಿ ವಕೀಲರ ಸಂಘ ನಿರ್ಧರಿಸಿದೆ ಎಂದು. ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು.
ನವೆಂಬರ್ 17 ರಂದು ಬೆಳಗ್ಗೆ 9.30 ಕ್ಕೆ ನಗರದ ಜೋಡುಕಟ್ಟೆಯಿಂದ ಅತಿಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು, ಮೆರವಣಿಗೆ ಮೂಲಕ ಜಿಲ್ಲಾ ನ್ಯಾಯಾಲಯವನ್ನು ತಲುಪುತ್ತೇವೆ. ಬೆಳಗ್ಗೆ 10 ಗಂಟೆಗೆ ಸರ್ವೋಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಆಂಧ್ರಪ್ರದೇಶದ ರಾಜ್ಯಪಾಲ, ಸುಪ್ರೀಂಕೋರ್ಟ್ ನ ವಿಶ್ರಾಂತ ನ್ಯಾಯಧೀಶ ಅಬ್ದುಲ್ ನಝೀರ್ ಮತ್ತಿತರರು ಭಾಗವಹಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. 18 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಭಟ್ಕಳ : ಅಲೆಗಳ ಹೊಡೆತಕ್ಕೆ ಸಮುದ್ರ ಮಧ್ಯೆ ಸಿಲುಕಿದ ಮಲ್ಪೆ ಬೋಟ್ ; ಮೀನುಗಾರರ ರಕ್ಷಣೆ – vishwanews24
ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ ಪುವೀಣ್ ಕುಮಾರ್, ಮಾಜಿ ಅಧ್ಯಕ್ಷ ಬಿ.ನಾಗರಾಜ್ , ಪ್ರ.ಕಾರ್ಯದರ್ಶಿ ರಾಜೇಶ್ ಎ.ಆರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
