ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – Vishwanews24
ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ
ಮಂಗಳೂರು: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಅಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ(ರಿ), ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.
11 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತೆರಳಿ 2 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು ಎಂದು ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕ ನಾಪತ್ತೆ – Vishwanews24

One thought on “ನ. 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – Vishwanews24”
ನೀವೊಂದು ಅವಾಗ್ ಅವಾಗ್ ಬರ್ತಾ ಇರೀ ಮರ್ರೆ ನೀವ್ ಬರೋದಕ್ಕಾದ್ರೂ ರಸ್ತೆ ರಿಪೇರಿ ಕಳ್ಳಾಟಕ್ಕ್ ಆದ್ರೂ ಮಾಡ್ತ್ರ್