ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19 ರಿಂದ 21 ರ ವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.
ನ. 19 ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ರಾತ್ರಿ 8 ಗಂಟೆಯಿ0ದ 12 ರ ವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿAದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್‌ನಿ0ದ ಕಲ್ಲೊಟ್ಟೆ, ಮಾರ್ಕೇಟ್ ಮಾರ್ಗವಾಗಿ ಬಸ್ನಿಲ್ದಾಣ ಪ್ರವೇಶಿಸಬೇಕು ಹಾಗೂ ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿ0ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ವರೆಗಿನ ಮಾರ್ಗದಲ್ಲಿ ದ್ವಿ–ಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.
ನ. 20 ರಂದು ಲಕ್ಷದೀಪೋತ್ಸವ ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10 ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 21 ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆಯಿ0ದ ಮರುದಿನ ಬೆಳಗ್ಗೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿ0ದ ಹಿರಿಯಂಗಡಿ, ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಬಸ್ಗಳು ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್‌ನಿAದ ಕಲ್ಲೊಟ್ಟೆ ಮಾರ್ಕೇಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿ0ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.
ಮೇಲ್ಕಂಡ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…