ಬೆಂಗಳೂರು : ನವೆಂಬರ್ 22ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದ್ದು, ನವೆಂಬರ್ 20ರಂದು ಅಧಿಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ, ಟ್ರಫ್ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯಾಗಿದ್ದು, ಒಳನಾಡಿನ ಕೆಲ ಜಿಲ್ಲೆಗಳಿಗೆ ಸೀಮಿತವಾಗಿದ್ದ ‘ಯೆಲ್ಲೋ ಅಲರ್ಟ್’ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿದ್ದು, ಅದೇ ರೀತಿ ಕರಾವಳಿ ಜಿಲ್ಲೆಗಳಿಗೆ ನೀಡಲಾಗಿದ್ದ ಭಾರಿ ಮಳೆಯ ಯೆಲ್ಲೋ ಅಲರ್ಟ್ ಅನ್ನು ‘ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್’ ಆಗಿ ಪರಿವರ್ತಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…