Featured

ನ. 23ರಂದು ಇ-ಸ್ಯಾಂಡ್‌ ಆ್ಯಪ್‌ ಮೂಲಕ ಮರಳು ವಿತರಣೆ , ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 23 ರಿಂದ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ /ಅಭಿವೃದ್ದಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಮರಳು ಅವಶ್ಯಕತೆ ಇರುವವರು ಆನ್ ಲೈನ್ (UDUPI E SAND APP) ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ನವೆಂಬರ್ 23 ರಂದು ಬೆಳಗ್ಗೆ 10 ಗಂಟೆಗೆ ಇ-ಸ್ಯಾಂಡ್ ಆಪ್ ಮೂಲಕ ಮರಳು ವಿತರಣೆ ಆರಂಭವಾಗಲಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಬಜೆ ಡ್ಯಾಂ ನಿಂದ ಹೂಳೆತ್ತುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಸಾರ್ವಜನಿಕರಿಗೆ /ಅಭಿವೃದ್ದಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸದರಿ ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನಗಳನ್ನು ಉಡುಪಿ ಇ-ಸ್ಯಾಂಡ್ ಆಪ್ ನಲ್ಲಿ ನೊಂದಾಯಿಸಿಕೊಳ್ಳಲು ಈಗಾಗಲೇ ತಿಳಿಸಲಾಗಿದೆ.

ಹಚ್ಚಿನ ಮಾಹಿತಿಗಾಗಿ, ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ, ಉಡುಪಿ ದೂ.ಸಂ. 0820-2572333 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

19 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

20 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

21 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

22 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

22 hours ago