Featured

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ -vishwanews24

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ : ಕಾರ್ಕಳ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವದ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನ. 27ರಿಂದ 29ರವರೆಗೆ ಕಾರ್ಕಳ ಮೂರು ಮಾರ್ಗದಿಂದ ಸ್ಟೇಟ್‌ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ನ.27ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ಸಂಜೆ 6 ಗಂಟೆಯಿಂದ ರಾತ್ರಿ 11ರವರೆಗೆ ಘನ ವಾಹನಗಳು ಬಂಗ್ಲೆಗುಡ್ಡೆಯಿಂದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ ನಿಂದ ಕಲ್ಲೊಟ್ಟೆ-ಮಾರ್ಕೇಟ್ ಮಾರ್ಗವಾಗಿ ಬಸ್‌ನಿಲ್ದಾಣ ಪ್ರವೇಶಿಸಬೇಕು ಹಾಗೂ ಸ್ಟೇಟ್‌ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ವರೆಗಿನ ಮಾರ್ಗದಲ್ಲಿ ದ್ವಿ-ಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.

ನ.28ರಂದು ಲಕ್ಷದೀಪೋತ್ಸವ ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 29ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆ ಯಿಂದ ಮರುದಿನ ಮುಂಜಾನೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿಂದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ ಮಾರ್ಕೆಟ್ ಮಾರ್ಗವಾಗಿ ಬಸ್‌ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್‌ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ : ಡಿ.1ರಿಂದ ದೇಶಾದ್ಯಂತ ಬಿಜೆಪಿಯ ‘ಸೇವಾ ದೂತ’ ಅಭಿಯಾನ -vishwanews24

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಡಿ.1ರಿಂದ ದೇಶಾದ್ಯಂತ ಬಿಜೆಪಿಯ 'ಸೇವಾ ದೂತ’ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ…

8 minutes ago

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ -vishwanews24

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ…

2 hours ago

ಉಡುಪಿ : ನ. 27ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ಡೈರಿ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ -vishwanews24

ಉಡುಪಿ : ನ. 27ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ಡೈರಿ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ ಉಡುಪಿ:…

2 hours ago

ನಂದಿನಿ ಮೊಸರಿನ ದರ 2 ರೂ.ಇಳಿಕೆ -vishwanews24

ನಂದಿನಿ ಮೊಸರಿನ ದರ 2 ರೂ.ಇಳಿಕೆ ಬೆಂಗಳೂರು : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ಮೊಸರಿನ…

2 hours ago

ಕುಂಜಾರುಗಿರಿ: ವ್ಯಕ್ತಿಯ ದರೋಡೆ ಪ್ರಕರಣ ;  ಆರೋಪಿ ಬಂಧನ -vishwanews24

ಕುಂಜಾರುಗಿರಿ: ವ್ಯಕ್ತಿಯ ದರೋಡೆ ಪ್ರಕರಣ ;  ಆರೋಪಿ ಬಂಧನ ಉಡುಪಿ: ಕುರ್ಕಾಲು ಗ್ರಾಮದ ಕುಂಜಾರುಗಿರಿ ದುರ್ಗಾದೇವಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮಕ್ಕೆ…

3 hours ago

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

2 days ago