ಉಡುಪಿ: ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗುವುದು ಖಚಿತವಾಗಿದ್ದು, ಶನಿವಾರ ಪ್ರಧಾನ ಮಂತ್ರಿಯವರ ಕಾರ್ಯಾಲಯ ಅಧಿಕೃತ ವೇಳಾ ಪಟ್ಟಿ ಪ್ರಕಟಿಸಿದೆ. ಪ್ರಧಾನ ಮಂತ್ರಿ ಕಾರ್ಯಾಲಯದಿಂದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಹೆಲಿಪ್ಯಾಡ್ ಸೇರಿ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಲು ಸೂಚಿಸಲಾಗಿದೆ.
ಕಾರ್ಯಕ್ರಮ ಆಯೋಜಕರಿಗೆ ಭದ್ರತಾ ವಿಚಾರಕ್ಕೆ ಸಂಬಂಧಿಸಿ ಎಸ್ ಪಿಜಿ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಪ್ರಧಾನಿ ಕಾರ್ಯಕ್ರಮದ ವೇಳಾ ಪಟ್ಟಿ ಇಂತಿದೆ
ಬೆಳಗ್ಗೆ 8. 15ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ವಾಯುಪಡೆಯ ವಿಮಾನದಲ್ಲಿ ಹೋರಟು 11. 05 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ. 11.10 ಕ್ಕೆ ಹೆಲಿಕ್ಯಾಪ್ಟರ್ ಮೂಲಕ 11.35 ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಇಳಿಯಲಿದ್ದಾರೆ.
12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
1.30 ಕ್ಕೆ ಮಠದಿಂದ ಹೊರಟು 1.45 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ 2.15 ಕ್ಕೆ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತೆರಳಿ ಗೋಕರ್ಣ ಪರ್ತಗಾಳಿ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…