Featured

ನ.28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕವರೆಗೆ ಭರ್ಜರಿ ರೋಡ್ ಶೋ – vishwanews24

ನ.28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕವರೆಗೆ ಭರ್ಜರಿ ರೋಡ್ ಶೋ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಅದಕ್ಕೆ ಮುನ್ನ ಬನ್ನಂಜೆಯ ನಾರಾಯಣಗುರು ವೃತ್ತದಿಂದ ಕಲ್ಸಂಕದವರೆಗೆ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಪ್ರಧಾನಿ ಮೋದಿಯವರ ಆಗಮನಕ್ಕಾಗಿ ಉಡುಪಿ ನಗರ ಸರ್ವಸನ್ನದ್ಧವಾಗಿದೆ.

ಮೋದಿಯವರು ನ. 28ರ ಬೆಳಗ್ಗೆ 11.05ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್‌ಗೆ 11.35ಕ್ಕೆ ಬರಲಿದ್ದಾರೆ. ಅಲ್ಲಿಂದ ರಸ್ತೆಯ ಮೂಲಕ ಶ್ರೀ ಕೃಷ್ಣಮಠಕ್ಕೆ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ಶ್ರೀ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು ಅನಂತರ ಗೀತಾಮಂದಿರಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಿ ಪಾರ್ಕಿಂಗ್ ಪ್ರದೇಶದ ಸಮೀಪದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭರ್ಜರಿ ರೋಡ್ ಶೋ
ಬನ್ನಂಜೆಯಿಂದ ಕಲ್ಸಂಕದವರೆಗೆ ಪ್ರಧಾನಿ ಮೋದಿ ಅವರ ರೋಡ್ ಶೋ ಇರುವುದರಿಂದ ಈ ಮಾರ್ಗದಲ್ಲಿ ಎರಡೂ ಕಡೆ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.35ಕ್ಕೆ ಆದಿಉಡುಪಿ ಹೆಲಿಪ್ಯಾಡ್‌ಗೆ ಮೋದಿಯವರು ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಶ್ರೀ ಮಠಕ್ಕೆ ಬರಲಿದ್ದಾರೆ. ಈ ವೇಳೆ ಬನ್ನಂಜೆಯಿಂದ ಕಲ್ಸಂಕದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕಾಗಿ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದ ಸಮೀಪ, ಜಯಲಕ್ಷ್ಮೀ ಸಿಲ್ಕ್ ಸಮೀಪ ಹಾಗೂ ಸಿಟಿ ಬಸ್ ನಿಲ್ದಾಣ ಸಮೀಪದಲ್ಲಿ ವೇದಿಕೆ ನಿರ್ಮಿಸಿ ಯಕ್ಷಗಾನ, ಹುಲಿವೇಷ ಹಾಗೂ ಕೃಷ್ಣವೇಷ ಪ್ರದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ. ಮೋದಿಯವರಿಗೆ ಈ ವೇಳೆ ಪುಷ್ಪಾರ್ಚನೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದರ್ಶನ ಸಮಯ ವ್ಯತ್ಯಯ
ಪ್ರಧಾನಿ ಮೋದಿ ಅವರು ಉಡುಪಿ ಶ್ರೀ ಕೃಷ್ಣಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನ.28ರ ಬೆಳಗ್ಗೆ 8ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಈ ಅವಧಿಯಲ್ಲಿ ದೇವಸ್ಥಾನದ ಒಳಗೆ ಭಕ್ತರ ಪ್ರವೇಶಕ್ಕೆ ಕೂಡ ಅವಕಾಶ ಇಲ್ಲ.

3 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ
ಎಸ್‌ಪಿಜಿ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ವಿಭಾಗ ಹೊರತುಪಡಿಸಿ ಸುಮಾರು 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. 9 ಮಂದಿ ಎಸ್‌ಪಿ, ಒಬ್ಬರು ಹೆಚ್ಚುವರಿ ಎಸ್ಎಪಿ, 27 ಮಂದಿ ಡಿವೈಎಸ್ಪಿ, 49 ಇನ್ ಸ್ಪೆಕ್ಟರ್ ಗಳು, 127 ಪಿಎಸ್ಐ, 232 ಎಎಸ್‌ಐ, 1608 ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳು, 309 ಮಹಿಳಾ ಪೊಲೀಸ್ ಕಾನ್ ಸ್ಟೆಬಲ್ ಗಳು, 7 ಸಶಸ್ತ್ರ ಮೀಸಲು ತಂಡ, 3 ಸಶಸ್ತ್ರ ಮೀಸಲು ಗಾರ್ಡ್, 6 ತ್ವರಿತ ಪ್ರತಿಕ್ರಿಯೆ ತಂಡ, 6 ಕೆಎಸ್‌ಆರ್‌ಪಿ, 48 ಬಾಂಬ್ ನಿಷ್ಕ್ರಿಯ ತಂಡ, 4 ಅಗ್ನಿಶಾಮಕ ವಾಹನ, 4 ಆ್ಯಂಬುಲೆನ್ಸ್, 33 ವಾಹನಗಳು ಇರಲಿವೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

18 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

21 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago