ರಾಮನಗರ: ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.
ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‍ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…