Featured

ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ KSRTC ಬಸ್ ಡಿಕ್ಕಿ : 20ಕ್ಕೂ ಹೆಚ್ಚು ಮಂದಿಗೆ ಗಾಯ ; ಬಸ್ ಚಾಲಕನ ಸ್ಥಿತಿ ಗಂಭೀರ – vishwanews24

ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ KSRTC ಬಸ್ ಡಿಕ್ಕಿ : 20ಕ್ಕೂ ಹೆಚ್ಚು ಮಂದಿಗೆ ಗಾಯ ; ಬಸ್ ಚಾಲಕನ ಸ್ಥಿತಿ ಗಂಭೀರ

ರಾಮನಗರ: ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್  ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.

ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‍ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

1 hour ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

3 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago