Featured

ಪಂಚರಾಜ್ಯ ಚುನಾವಣೆ : ಛತ್ತೀಸ್‌ಗಢ, ಮಿಜೋರಾಂನಲ್ಲಿ ಮೊದಲ ಹಂತದ ಮತದಾನ – vishwanews24

ಪಂಚರಾಜ್ಯ ಚುನಾವಣೆ : ಛತ್ತೀಸ್‌ಗಢ, ಮಿಜೋರಾಂನಲ್ಲಿ ಮೊದಲ ಹಂತದ ಮತದಾನ

ರಾಯ್ ಪುರ/ಐಜ್ವಾಲ್ : ಪಂಚರಾಜ್ಯ ಚುನಾವಣೆಗಳ ಪೈಕಿ ಇಂದು ಛತ್ತೀಸ್‌ಗಢ ಮತ್ತು ಮಿಜೋರಾಂನಲ್ಲಿ ಮೊದಲ ಹಂತ ಮತದಾನ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಭೇಟಿ ನೀಡಿ ಮತ ಚಲಾವಣೆ ಮಾಡುತ್ತಿದ್ದಾರೆ.

ಭದ್ರತಾ ದೃಷ್ಟಿಯಿಂದ ಚುನಾವಣಾ ಆಯೋಗವು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಿದೆ. ಇಂದು ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಮತದಾನ ಶುರುವಾಗಿದ್ದು, ಒಟ್ಟು 20 ಕ್ಷೇತ್ರಗಳ 223 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ. ಇದಾದ ನಂತರ ನವೆಂಬರ್ 17 ರಂದು ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಮತದಾನ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಮಧ್ಯಾಹ್ನ 3ರವರೆಗೆ 10 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 10 ಕ್ಷೇತ್ರಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಅದೇ ರೀತಿ ಮಿಜೋರಾಂನ ಎಲ್ಲ 40 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ಮತಗಳನ್ನು ಚಲಾಯಿಸುತ್ತಿದ್ದಾರೆ. ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಶನಲ್‌ ಫ್ರಂಟ್‌, ವಿಪಕ್ಷ ಜೊರಾಂ ಪೀಪಲ್ಸ್‌ ಫ್ರಂಟ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 18 ಮಹಿಳೆಯರು ಸೇರಿ 174 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಈ ವಿಧಾನಸಭಾ ಚುನಾವಣೆಗಳು ಕೇಂದ್ರದಲ್ಲಿ ಬಿಜೆಪಿ, ಹೊಸದಾಗಿ ರೂಪುಗೊಂಡ ವಿರೋಧ ಪಕ್ಷವಾದ ಇಂಡಿಯಾ ಬಣ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಇದರ ಫಲಿತಾಂಶವು ಮುಂಬರುವ 2024 ರ ಲೋಕಸಭಾ ಚುನಾವಣೆಯ ರೂಪುರೇಷೆ ಮೇಲೆ ಪ್ರಭಾವ ಬೀರುವುದು ಖಚಿತ ಎಂದು ತಿಳಿದು ಬಂದಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

23 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

23 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

24 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago