ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಅಂಬಲ್ಪಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಜಂಟಿ ಆಶ್ರಯದಲ್ಲಿ ಅಂಬಲಪಾಡಿ ಪಂಚಾಯತ್ ಮಟ್ಟದ, ಪಂಚಾಯತ್ ಚುನಾವಣೆಯ ಪೂರ್ವಭಾವಿ ಕಾರ್ಯಕರ್ತರ ಸಭೆ ಕಪ್ಪೆಟ್ಟು ರವೀಶ್ ಪೂಜಾರಿ ಮನೆಯಲ್ಲಿ ಜರಗಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಮಾತನಾಡುತ್ತಾ ಇತ್ತೀಚಿಗೆ ನೆರೆ ಬಂದಾಗ ಕಿದಿಯೂರು, ಬಂಕೇರಕಟ್ಟೆ, ಮಜ್ಜಿಗೆಪಾದೆ ದಡ್ಡಿ, ಮೊದಲಾದ ಪ್ರದೇಶದಲ್ಲಿ ಅಧಿಕಾರಿಗಳಿಗಿಂತ ಮೊದಲೇ ನಮ್ಮ ಪಕ್ಷದ ಕಾರ್ಯಕರ್ತರು ನೆರೆ ಪೀಡಿತ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಮುಂಬರುವ ಪಂಚಾಯತ್ ಚುನಾವಣೆಗೆ ಸ್ಥಳೀಯ ಚಿರಪರಿಚಿತ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಾರ್ಯಕರ್ತರ ಆದ್ಯ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ ಅವರು ಮಾತನಾಡಿದರು.
ಸಭೆಯಲ್ಲಿ ಕೀರ್ತಿ ಶೆಟ್ಟಿ ಅಂಬಲಪಾಡಿ, ಗಣೇಶ್ ನೆರ್ಗಿ, ವೀಕ್ಷಕರಾದ ವಿಜಯ ಪೂಜಾರಿ, ಸುರೇಂದ್ರ ಆಚಾರ್ಯ, ನಾರಾಯಣ ಕುಂದರ್, ಪಂಚಾಯತ್ನ ನಿಕಟಪೂರ್ವ ಸದಸ್ಯರಾದ ಲಕ್ಷಣ ಪೂಜಾರಿ, ಸುರೇಶ್ ಪೂಜಾರಿ, ಶಕುಂತಳ, ರೀಟಾ ಗಾಮ, ಪೀರು ಸಾಹೇಬ್, ಜೆರೊಮ್ ಅಂದ್ರಾದೆ, ಲೂವಿಸ್ ಲೋಬೊ, ದಯಾನಂದ ಪೂಜಾರಿ, ಜ್ಯೋತಿ, ಉದಯ, ಮಹೇಶ್ ಶೆಟ್ಟಿ, ಸದಾನಂದ ಪೂಜಾರಿ, ಜಗನ್ನಾಥ ಪೂಜಾರಿ, ಮೋಹಿನಿ ಭಾಸ್ಕರ್ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸಾಯಿರಾಜ್ ಕೋಟ್ಯಾನ್ ಸ್ವಾಗತಿಸಿದರು. ರವೀಶ್ ಪೂಜಾರಿ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…