Featured

ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ – vishwanews24

ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ

ಮುಂಬೈ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು  ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ  ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ.

ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ. ಆರೋಪಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

ನಿಜಾಮಾಬಾದ್ ಪೊಲೀಸರು ಪ್ರಕರಣದ ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಅನರ್ಹನಾಗಿದ್ದ.

ಈ ವಿಚಾರವನ್ನು ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜೊತೆ ಚರ್ಚಿಸಿ ಅವಳಿ ಮಕ್ಕಳಲ್ಲಿ ಹಿರಿಯಳಾದ ಪ್ರಾಚಿಯನ್ನು ಎಲ್ಲಾದರೂ ಬಿಟ್ಟು ಬರಲು ಯೋಚಿಸಿದ್ದ. ಬಳಿಕ ಅವಳು ವಾಪಸ್‌ ಬಂದರೆ ತೊಂದರೆ ಆಗುತ್ತದೆ ಎಂದು ಕಾಲುವೆಗೆ ತಳ್ಳಿ ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ.

ಅಲ್ಲಿಯೇ ಸಮೀಪದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ನೀರಿಗೆ ಏನೋ ಬಿದ್ದ ಶಬ್ಧ ಕೇಳಿ, ಬಂದು ನೋಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಫೋಟೋ ವೈರಲ್‌ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು, ಆರೋಪಿಗಳನ್ನು ಬಂಧಿಸಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago