Featured

ಪಂಚೆಯುಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್‌ ಆಡಳಿತ ಮಂಡಳಿಯಿಂದ ಸನ್ಮಾನ – vishwanews24

ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ  ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್‌  ಆಡಳಿತ ಮಂಡಳಿ ಕ್ಷಮೆಯಾಚಿಸಿದೆ.

ಘಟನೆ ಕುರಿತು ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್‌, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನವೂ ವ್ಯಕ್ತಿಯೊಬ್ಬರು ಪಂಚೆ ಧರಿಸಿ ಮಾಲ್‌ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಉಟ್ಕೊಂಡು ನಿಂತಿದ್ರು. ಆಗ ಕೆಳಗಿನ ಫ್ಲೋರ್‌ನಲ್ಲಿ ಬರ್ತ್‌ಡೇ ಪಾರ್ಟಿಯ ಇವೆಂಟ್ ನಡೆಯುತ್ತಿತ್ತು. ಈ ವಿಚಾರವನ್ನು ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೆವು ಎಂದಿದ್ದಾರೆ.

ಸಂಜೆ ಮತ್ತೆ ರೈತನೊಬ್ಬ ಪಂಚೆ ಉಟ್ಟುಕೊಂಡು ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೇವೆ. ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ‌. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೆ ಎಂದು ಹೇಳಿದ್ದಾರೆ.

ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಮಾಲ್‌ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಾಲ್‌ ಮುಂದೆ ಪ್ರತಿಭಟನೆ ನಡೆಸಿದರು.

ನಿನ್ನೆ ರೈತ ಫಕೀರಪ್ಪಗೆ ಪ್ರವೇಶ ನಿರಾಕರಿಸಿ ಜಿಟಿ ಮಾಲ್‌ನಲ್ಲಿ ಅವಮಾನಿಸಲಾಗಿತ್ತು. ಇಂದು ಅದೇ ಮಾಲ್‌ ಆಡಳಿತ ಮಂಡಳಿಯ ಉಸ್ತುವಾರಿ ಸುರೇಶ್‌ ಅವರಿಂದ ರೈತ ಫಕೀರಪ್ಪರನ್ನು ಸನ್ಮಾನಿಸಲಾಯಿತು. ಶಾಲು, ಹೂವಿನ ಹಾರ ಹಾಕಿ ಸನ್ಮಾನಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago