Featured

ಪಂಚ ಭಾಷೆಯಲ್ಲಿ ‘ದಮಯಂತಿ’ಯಾಗಿ ಅಬ್ಬರಿಸಲಿದ್ದಾರೆ ರಾಧಿಕಾ ಕುಮಾರಸ್ವಾಮಿ – Vishwanews24

ಬೆಂಗಳೂರು:ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ ‘ದಮಯಂತಿ’ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ.  ರಾಧಿಕಾ ಅಭಿನಯದ ‘ದಮಯಂತಿ’ ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ.

‘ದಮಯಂತಿ’ ಚಿತ್ರದ ಟೀಸರ್ ಈ ತಿಂಗಳಾಂತ್ಯದಲ್ಲಿ ತೆರೆಗೆ ಬರುತ್ತಿದೆ. ಈಗಾಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ದಮಯಂತಿ’ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ವಿಶೇಷ ಅಂದ್ರೆ ಚಿತ್ರ ಐದು ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ.

ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿತ್ತು ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ‘ದಮಯಂತಿ’ ಸಿನಿಮಾ. ಕನ್ನಡದ ಜತೆಗೆ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂಬುದರ ಬಗ್ಗೆಯೂ ನಿರ್ದೇಶಕ ನವರಸನ್ ಮಾಹಿತಿ ನೀಡಿದ್ದರು. ಅದರಂತೆ ಈಗ ಐದು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡುವ ಉತ್ಸಾಹದಲ್ಲಿದ್ದಾರವರು. ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಇದೇ ತಿಂಗಳಾಂತ್ಯಕ್ಕೆ ಚಿತ್ರದ ಟೀಸರ್ ಬಿಡುಗಡೆ ಮಾಡಲು ಯೋಜನೆ ರೂಪಿಸಿದ್ದಾರೆ.

ಸದ್ಯ ಟೀಸರ್ ಕೂಡ ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿದೆ ಚಿತ್ರತಂಡ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ.  ಹಿಂದಿ ಮತ್ತು ಮಲಯಾಳಂಗೆ ‘ದಮಯಂತಿ’ ಡಬ್ ಮಾಡಲಾಗಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಕನ್ನಡದಂತೆ ನೇರವಾಗಿ ಚಿತ್ರೀಕರಣ ಮಾಡಿರುವುದು ವಿಶೇಷ.

ಐದು ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಟೀಸರ್ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್ ನಟರ ಬಳಿ ಅದ್ಧೂರಿಯಾಗಿ ರಿಲೀಸ್ ಮಾಡಿಸುವ ಪ್ಲಾನ್ ಮಾಡಿದೆ ಚಿತ್ರತಂಡ. ಈ ತಿಂಗಳ ಅಂತ್ಯಕ್ಕೆ ಟೀಸರ್ ರಿಲೀಸ್ ಆದ್ರೆ ಮುಂದಿನ ತಿಂಗಳು ಆಗಸ್ಟ್ ನಲ್ಲಿ ಚಿತ್ರದ ಹಾಡುಗಳು ತೆರೆಗೆ ಬರುವ ಸಾಧ್ಯತೆ ಇದೆ.

ದಮಯಂತಿ ನವರಸನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ರಿಲೀಸ್ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ಒಂದಿಷ್ಟು ಲುಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಐದು ಭಾಷೆಯಲ್ಲಿ ಅಬ್ಬರಿಸಲು ಸಿದ್ಧವಾಗಿರುವ ದಮಯಂತಿ ಸೆಪ್ಟಂಬರ್ ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago