ಬೆಂಗಳೂರು:ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ ‘ದಮಯಂತಿ’ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ. ರಾಧಿಕಾ ಅಭಿನಯದ ‘ದಮಯಂತಿ’ ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ.
‘ದಮಯಂತಿ’ ಚಿತ್ರದ ಟೀಸರ್ ಈ ತಿಂಗಳಾಂತ್ಯದಲ್ಲಿ ತೆರೆಗೆ ಬರುತ್ತಿದೆ. ಈಗಾಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ದಮಯಂತಿ’ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ವಿಶೇಷ ಅಂದ್ರೆ ಚಿತ್ರ ಐದು ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ.
ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿತ್ತು ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ‘ದಮಯಂತಿ’ ಸಿನಿಮಾ. ಕನ್ನಡದ ಜತೆಗೆ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂಬುದರ ಬಗ್ಗೆಯೂ ನಿರ್ದೇಶಕ ನವರಸನ್ ಮಾಹಿತಿ ನೀಡಿದ್ದರು. ಅದರಂತೆ ಈಗ ಐದು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡುವ ಉತ್ಸಾಹದಲ್ಲಿದ್ದಾರವರು. ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಇದೇ ತಿಂಗಳಾಂತ್ಯಕ್ಕೆ ಚಿತ್ರದ ಟೀಸರ್ ಬಿಡುಗಡೆ ಮಾಡಲು ಯೋಜನೆ ರೂಪಿಸಿದ್ದಾರೆ.
ಸದ್ಯ ಟೀಸರ್ ಕೂಡ ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿದೆ ಚಿತ್ರತಂಡ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಹಿಂದಿ ಮತ್ತು ಮಲಯಾಳಂಗೆ ‘ದಮಯಂತಿ’ ಡಬ್ ಮಾಡಲಾಗಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಕನ್ನಡದಂತೆ ನೇರವಾಗಿ ಚಿತ್ರೀಕರಣ ಮಾಡಿರುವುದು ವಿಶೇಷ.
ಐದು ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಟೀಸರ್ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್ ನಟರ ಬಳಿ ಅದ್ಧೂರಿಯಾಗಿ ರಿಲೀಸ್ ಮಾಡಿಸುವ ಪ್ಲಾನ್ ಮಾಡಿದೆ ಚಿತ್ರತಂಡ. ಈ ತಿಂಗಳ ಅಂತ್ಯಕ್ಕೆ ಟೀಸರ್ ರಿಲೀಸ್ ಆದ್ರೆ ಮುಂದಿನ ತಿಂಗಳು ಆಗಸ್ಟ್ ನಲ್ಲಿ ಚಿತ್ರದ ಹಾಡುಗಳು ತೆರೆಗೆ ಬರುವ ಸಾಧ್ಯತೆ ಇದೆ.
ದಮಯಂತಿ ನವರಸನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ರಿಲೀಸ್ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ಒಂದಿಷ್ಟು ಲುಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಐದು ಭಾಷೆಯಲ್ಲಿ ಅಬ್ಬರಿಸಲು ಸಿದ್ಧವಾಗಿರುವ ದಮಯಂತಿ ಸೆಪ್ಟಂಬರ್ ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…