ಗಾಂಧೀನಗರ: ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನೆಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಗುಜರಾತ್ ಚುನಾವಣೆಯತ್ತ ಗಮನ ಹರಿಸಿದ್ದು, ಅಹಮದಾಬಾದ್‍ನಲ್ಲಿ ಇಂದು ರೋಡ್ ಶೋ ನಡೆಸಿದರು.
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೂ ಹೂವಿನಿಂದ ಅಲಂಕರಿಸಲ್ಪಟ್ಟ ತೆರೆದ ಕಾರಿನಲ್ಲಿ ಮೋದಿ ಅವರು ರೋಡ್ ನಡೆಸಿದರು. ಈ ನಡುವೆ ರಸ್ತೆಯ ಬದಿಗಳಲ್ಲಿ ಮೋದಿ ಅವರನ್ನು ನೋಡಲು ಮುಗಿಬಿದ್ದಿದ್ದ ಜನರತ್ತ ಮೋದಿ ಕೈ ಬೀಸಿದರು. ಜೊತೆಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀ ರಾಮ್ ಮತ್ತು ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.
ವಿಮಾನ ನಿಲ್ದಾಣದಿಂದ ಬಿಜೆಪಿ ಕಚೇರಿ ಸುಮಾರು 10ಕಿ.ಮೀ.ವರೆಗೂ ಇದ್ದು, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ರೋಡ್ ಶೋ ವೇಳೆ ಮೋದಿ ಅವರಿಗೆ ಸಾಥ್ ನೀಡಿದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…