Featured

ಪಂಜಾಬ್ ನಲ್ಲಿ ಮಾತ್ರವೇ ನಮಗೆ ಸೋಲಾಗಿದೆ ; ಅಲ್ಲಿ ಏನು ಬಿಜೆಪಿ ಅಧಿಕಾರಕ್ಕೆ ಬಂದಿದೆಯೇ? : ಸಿದ್ಧರಾಮಯ್ಯ – Vishwanews24

ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಬಿಜೆಪಿ ಹಿಗ್ಗಿಕೊಳ್ಳುವಂತಹ ಸಾಧನೆಯನ್ನೇನು ಮಾಡಿಲ್ಲ..

ಬೆಂಗಳೂರು: ಈ ಹಿಂದೆ ಪಂಜಾಬ್ ನಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೆ, ಈ ಬಾರಿ ನಾವು ಅದನ್ನು ಕಳೆದುಕೊಂಡಿದ್ದೇವೆ. ಪಂಜಾಬ್ ನಲ್ಲಿ ಮಾತ್ರವೇ ನಮಗೆ ಸೋಲಾಗಿದೆ ಎಂದು ವಿಧಾನಸಭಾ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

‘ನಮಗೆ ಕೈತಪ್ಪಿದ್ದು ಪಂಜಾಬ್ ರಾಜ್ಯ ಒಂದೇ. ಅಲ್ಲಿ ಏನು ಬಿಜೆಪಿ ಅಧಿಕಾರಕ್ಕೆ ಬಂದಿದಯೇ? ಅವರು ಪ್ರಶ್ನಿಸಿದ್ದಾರೆ. ಪಂಚರಾಜ್ಯ ಚುನಾವಣಾ ಫಲಿತಾಂಶ ಗಮನಿಸಿದ ಸಂದರ್ಭದಲ್ಲಿ ಈ ಹಿಂದೆ ಕಾಂಗ್ರೆಸ್ ಪಂಜಾಬ್ ನಲ್ಲಿ ಅಧಿಕಾರದಲ್ಲಿತ್ತು. ಅದು ನಮ್ಮ ಕೈ ತಪ್ಪಿದೆ. ಉಳಿದ ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ ಎಂಬುವುದಾಗಿ ಅವರು ತಿಳಿಸಿದ್ದಾರೆ.

ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಬಿಜೆಪಿ ಹಿಗ್ಗಿಕೊಳ್ಳುವಂತಹ ಸಾಧನೆಯನ್ನೇನು ಮಾಡಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ‘ನಮ್ಮ ತಪ್ಪಿನಿಂದಾಗಿ ಪಂಜಾಬ್ ಕಳೆದುಕೊಂಡಿದ್ದೇವೆ. ಆದರೆ, ಚುನಾವಣೆಗಿಂತ ಮುಂಚೆಯೇ ಅಲ್ಲಿಯೇನೂ ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಹೀಗಾಗಿ ನಮ್ಮ ಸೋಲು ಪಂಜಾಬ್ ಮಾತ್ರ’ ಎಂದು ಹೇಳಿದ್ದಾರೆ. ಉಳಿದ ರಾಜ್ಯಗಳಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿತ್ತು. ಈ ಬಾರಿಯೂ ಕೂಡ ಜನ ಅದೇ ಪಕ್ಷಕ್ಕೆ ಆಶೀರ್ವಾದ ನೀಡಿದ್ದಾರೆ. ಅದರಲ್ಲಿ ಸಂಭ್ರಮಿಸುವುದೇನಿದೆ ಮಹಾ ಎಂದು ಅವರು ಪ್ರಶ್ನಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

16 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

16 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago