ಪಂಜಾಬ್: ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷವು ಭಾರೀ ಮುನ್ನಡೆ ಸಾಧಿಸುತ್ತಿದ್ದು, ಗೆಲುವು ಬಹುತೇಕ ಖಚಿತವಾಗಿದೆ. ಇತ್ತ ಮ್ಯಾಜಿಕ್ ನಂಬರ್ ದಾಟುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಮತ ಎಣಿಕೆ ಕೇಂದ್ರಗಳ ಹೊರಗೆ, ಪಕ್ಷದ ಕಚೇರಿ ಸೇರಿದಂತೆ ಹಲವೆಡೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು, ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಒಟ್ಟು 117 ಕ್ಷೇತ್ರಗಳಲ್ಲಿ ಆಪ್ 72 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 20, ಎಸ್ ಎಡಿ 28, ಬಿಜೆಪಿ 4 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
117 ಸ್ಥಾನಗಳ ಪೈಕಿ ಅಧಿಕಾರದ ಗದ್ದುಗೆ ಏರಲು 59 ಸ್ಥಾನಗಳ ಅಗತ್ಯವಿದ್ದು, ಈ ಮ್ಯಾಜಿಕ್ ನಂಬರ್ ನ್ನು ದಾಟಿರುವುದರಿಂದ ಆಮ್ ಆದ್ಮಿ ಪಾರ್ಟಿ ಗೆಲುವಿನತ್ತ ದಾಪುಗಾಲಿಡುತ್ತಿದೆ.
ಈ ನಡುವೆ ಪಂಜಾಬ್ ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಗೆ ಈ ಚುನಾವಣಾ ಫಲಿತಾಂಶ ತೀವ್ರ ಮುಖಭಂಗಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಬದೌರ್ ಹಾಗೂ ಚಮ್ ಕೌರ್ ಸಾಹಿಬ್ ಕೂಡಾ ತಮ್ಮ ಕ್ಷೇತ್ರದಲ್ಲಿ ಹಿನ್ನಡೆ ಗಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…