ಪಂಜಾಬ್ : ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ಇಂದಿನಿಂದ ಆರಂಭ – Vishwanews24

Featured, ರಾಷ್ಟ್ರ ನ್ಯೂಸ್

ಪಂಜಾಬ್ : ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ಇಂದಿನಿಂದ ಆರಂಭ – Vishwanews24

ಚಂಢೀಗಡ್: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಆಮ್ ಆದ್ಮಿ ಪಕ್ಷದ ಆಡಳಿತ ರಾಜ್ಯದಲ್ಲಿ ಇಂದಿನಿಂದ ಆರಂಭವಾಗಲಿದೆ.

ಸ್ವಾತಂತ್ರ್ಯಯೋಧ ಭಗತ್ ಸಿಂಗ್ ಹುಟ್ಟೂರು ಖಾಟ್ಕರ್ ಕಲಾನ್ ನಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ರಾಜಭವನ ಹೊರತುಪಡಿಸಿ ಭಗತ್ ಸಿಂಗ್ ಹುಟ್ಟೂರಿನಲ್ಲಿ‌ ಪ್ರಮಾಣವಚನ ಬೋಧಿಸಲು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಒಪ್ಪಿಗೆ ನೀಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಆಮ್ ಆದ್ಮಿ ಪಕ್ಷ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ 2ನೇ ರಾಜ್ಯದಲ್ಲಿ ಎಎಪಿ ಆಡಳಿತ ಬುಧವಾರ ಆರಂಭವಾಗಲಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ : 18 ಅಧಿಕಾರಿಗಳ ಮೇಲೆ ಎಸಿಬಿ ದಾಳಿ – Vishwanews24

Leave a Reply