ಬೆಳ್ತಂಗಡಿ : ಕಾಂತಾರ ಸಿನೆಮಾದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳಕ್ಕೆ ಆಗಮಿಸಿ ತನ್ನ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.
ಮೇಕಪ್ ಆರ್ಟಿಸ್ಟ್ ಆಗಿರುವ ಶ್ವೇತಾ ರೆಡ್ಡಿ ಎಂಬ ಯುವತಿ ಕಾಂತಾರ ಸಿನೆಮಾದಲ್ಲಿ ಬರುವ ಪಂಜುರ್ಲಿ ದೈವದ ರೀತಿ ಮೇಕಪ್ ಮಾಡಿಕೊಂಡು, ದೈವದ ರೀಲ್ ಮಾಡಿ, ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ಈ ಪೋಸ್ಟ್ ವೈರಲ್ ಆಗಿ ಯುವತಿಯ ವಿರುದ್ದ ಆಕ್ರೋಶ ಕೇಳಿ ಬಂದಿತ್ತು. ನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ದೈವಾರಾಧನೆ ಅಣಕ ಮಾಡಿರುವ ಯುವತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದರು. ದೈವಾರಾಧನೆಯು ತುಳುನಾಡಿನ ಧಾರ್ಮಿಕ ನಂಬಿಕೆಯ ಭಾಗವಗಿದೆ. ಹೀಗಾಗಿ ತುಳುನಾಡಿನ ನಂಬಿಕೆಗೆ ಇದರಿಂದ ಧಕ್ಕೆಯಾಗಿದೆ, ರೀಲ್ಸ್‌ನ್ನು ತಕ್ಷಣ ಡಿಲೀಟ್ ಮಾಡಿ ಕ್ಷಮೆ ಕೇಳುವಂತೆ ಹಲವರು ಕಾಮೆಂಟ್ ಮಾಡಿದ್ದಾರೆ. ಆಕ್ರೋಶದ ಬಳಿಕ ಇನ್‌ಸ್ಟಾಗ್ರಾಮ್ ಖಾತೆಯಿಂದ ಯುವತಿ ರೀಲ್ಸ್ ಡಿಲೀಟ್ ಮಾಡಿದ್ದಾಳೆ.
ಸುಳ್ಯ : 2ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು – Vishwanews24
ಇದರ ಬೆನ್ನಲ್ಲೇ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಬಂದ ಶ್ವೇತ. ಎಸ್.ರೆಡ್ಡಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ನಂತರ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿ ಕ್ಷಮೆ ಕೇಳಿದ್ದಾರೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…