Featured

ಪಂದ್ಯದ ವೇಳೆ ಹೃದಯಾಘಾತ :  ಬಾಂಗ್ಲಾ ಕ್ರಿಕೆಟ್ ಆಟಗಾರ ತಮೀಮ್ ಇಕ್ಬಾಲ್‌ ಆಸ್ಪತ್ರೆಗೆ ದಾಖಲು – vishwanews24

ಪಂದ್ಯದ ವೇಳೆ ಹೃದಯಾಘಾತ :  ಬಾಂಗ್ಲಾ ಕ್ರಿಕೆಟ್ ಆಟಗಾರ ತಮೀಮ್ ಇಕ್ಬಾಲ್‌ ಆಸ್ಪತ್ರೆಗೆ ದಾಖಲು

ಢಾಕಾ: ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತವಾಗಿದ್ದರಿಂದ ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ತಮೀಮ್ ಇಕ್ಬಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ನಡೆದ ದೇಶೀಯ ಕ್ರಿಕೆಟ್ ಪಂದ್ಯದ ವೇಳೆ ಈ ಘಟನೆ ನಡೆದಿದೆ. 36 ವರ್ಷದ ತಮೀಮ್ ಇಕ್ಬಾಲ್ ಅವರು ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್‌ ಅನ್ನು ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ನ 50 ಓವರ್ ಪಂದ್ಯದಲ್ಲಿ ಮುನ್ನಡೆಸುತ್ತಿದ್ದರು.

ತಮೀಮ್ ಟಾಸ್ ಚಿಮ್ಮಿಸಲು ಕ್ರೀಡಾಂಗಣದಲ್ಲಿ ಹಾಜರಿದ್ದರು. ಬಳಿಕ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವ ಮೊದಲು ಅವರಿಗೆ ಮೈದಾನದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ತಮೀಮ್ 2007 ರಿಂದ 2023 ರವರೆಗೆ ಎಲ್ಲಾ ಸ್ವರೂಪದ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶದ ಪರವಾಗಿ 391 ಪಂದ್ಯಗಳನ್ನು ಆಡಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ತಮೀಮ್ 15,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಎಲ್ಲಾ ಮೂರು ಅಂತರರಾಷ್ಟ್ರೀಯ ಕ್ರಿಕೆಟ್ ಸ್ವರೂಪಗಳಲ್ಲಿ ಶತಕಗಳನ್ನು ದಾಖಲಿಸಿದ ಏಕೈಕ ಬಾಂಗ್ಲಾದೇಶದ ಬ್ಯಾಟ್ಸ್‌ಮನ್ ಆಗಿ ಸಾಧನೆ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago