ಮಂಗಳೂರು : ಭಾರಿ ಟ್ರೋಲ್ ಗೆ ಒಳಗಾಗಿದ್ದ ಮಂಗಳೂರಿನ ಎರಡು ಪ್ಲೈಓವರ್ ಗಳ ಕಾಮಗಾರಿ ಕೊನೆಯ ಹಂತ ತಲುಪಿದೆ.
ಆಗಸ್ಟ್ ಮೊದಲ ವಾರದಲ್ಲಿ ಪಂಪ್ ವೆಲ್ ಪ್ಲೈಓವರ್ ಕೂಡ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ತೊಕ್ಕೊಟ್ಟು ಹಾಗೂ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿಯನ್ನುಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು ಕಳೆದ 6 ತಿಂಗಳಿನಿಂದ ಈ ಎರಡು ಫ್ಲೈಓವರ್ ಕಾಮಗಾರಿ ವೇಗ ಪಡೆದುಕೊಂಡಿದೆ. ಸಂಸ್ಥೆಯು ತಾಂತ್ರಿಕ ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸೂಚನೆಯ ಮೇರೆಗೆ 55 ಕೋ.ರೂ. ಸಾಲ ಕೂಡ ಸಂಸ್ಥೆಗೆ ನೀಡಲಾಯಿತು.
ಚುನಾವಣೆ ಕಾರಣ ಕಾಮಗಾರಿ ಮತ್ತೆ ವಿಳಂಬ ಹಾಗೂ ನೀತಿಸಂಹಿತೆ ಹಿನ್ನೆಲೆಯಲ್ಲಿ ನಮಗೆ ಮಧ್ಯಪ್ರವೇಶ ಮಾಡಲು ಸಾಧ್ಯವಾಗಿಲ್ಲ. ಈಗ ಯೋಜನೆಗೆ ವೇಗ ದೊರಕಿದೆ. 1 ತಿಂಗಳೊಳಗೆ ಉಜೊಡಿ ಅಂಡರ್‌ಪಾಸ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ತಾಂತ್ರಿಕ ಸಮಸ್ಯೆಗಳಿಂದಾಗಿ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಕುಂಠಿತವಾಗಿದ್ದರೂ ಈಗ ಶೇ.98 ಕೆಲಸ ಮುಗಿದಿದ್ದು, ಮುಂದಿನ ವಾರ ಪೂರ್ಣಗೊಳ್ಳಲಿದೆ ಎಂದು ಸಂಸದ ನಳಿನ್ ಹೇಳಿದರು. ಬುಧವಾರ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 10ರಂದು ಸೇತುವೆ ಲೋಕಾರ್ಪಣೆ ಆಗಲಿದೆ. ವಾಹನ ಸವಾರರು, ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…