Featured

ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ :  ತಾಯಿ-ಮಗಳು ನೇಣಿಗೆ ಶರಣು – vishwanews24

ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ :  ತಾಯಿ-ಮಗಳು ನೇಣಿಗೆ ಶರಣು

ಮಂಡ್ಯ : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಈ ದಾರುಣ ಘಟನೆಯಿಂದ ಇಡೀ ಗ್ರಾಮವೇ ಶೋಕದಲ್ಲಿದೆ.

ಮೃತರನ್ನು ಪ್ರಿಯಾಂಕಾ (19) ಮತ್ತು ಅವರ ತಾಯಿ ಶಕುಂತಲಾದೇವಿ (46) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಮನೆಯಲ್ಲೇ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಪಕ್ಕದ ಮನೆಯವರ ನಿರಂತರ ಕಿರುಕುಳ ಮತ್ತು ಬೆದರಿಕೆಯೇ ಕಾರಣ ಎನ್ನುವ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ.

ಶಕುಂತಲಾದೇವಿ ತಮ್ಮ ಮಗಳ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಪ್ರಿಯಾಂಕಾ ಕೂಡ ಹೊಸ ಜೀವನ ಆರಂಭಿಸುವ ಕನಸಿನಲ್ಲಿದ್ದಳು. ಆದರೆ ಈ ದುರ್ಘಟನೆ ಮದುವೆ ಮನೆಯನ್ನು ಸಾವಿನ ಮನೆಗೆ ತಿರುಗಿಸಿದೆ. ಸಂಭ್ರಮದ ಮನೆಗೆ ಸೂತಕ ಆವರಿಸಿರುವುದು ಕುಟುಂಬಸ್ಥರನ್ನು ಆಘಾತಕ್ಕೆ ಒಳಪಡಿಸಿದೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪಕ್ಕದ ಮನೆಯವರು ನಿಜಕ್ಕೂ ಬೆದರಿಕೆ ಹಾಕಿದ್ದರೇ? ಯಾವ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು? ಎಂಬ ಎಲ್ಲಾ ಅಂಶಗಳನ್ನು ಪೊಲೀಸರು ತನಿಖೆ ಮೂಲಕ ಪತ್ತೆ ಹಚ್ಚಲಿದ್ದಾರೆ. ಈ ಘಟನೆ ಊರು-ಕೇರಿಗಳಲ್ಲಿ ನಡೆಯುವ ಸಣ್ಣ ಜಗಳಗಳು ಎಷ್ಟು ಭೀಕರ ಪರಿಣಾಮಕ್ಕೆ ಕಾರಣವಾಗಬಹುದು ಎಂಬುದಕ್ಕೆ ಮತ್ತೊಂದು ಕಳವಳಕಾರಿ ಉದಾಹರಣೆಯಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago