Featured

ಪಕ್ಷಕ್ಕಾಗಿ ಸಕ್ರೀಯ ಕೆಲಸ ಮಾಡಿದ್ದ ರಮ್ಯಾ ಒಂದು ತಿಂಗಳ ವಿಶ್ರಾಂತಿಯಲ್ಲಿದ್ದು ಶೀಘ್ರವೇ ಪಕ್ಷಕ್ಕೆ ಮರಳಿ ಮತ್ತೆ ಸಕ್ರಿಯರಾಗಲಿದ್ದಾರೆ : ಪುಷ್ಪಾ ಅಮರನಾಥ್ -Vishwanews24

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ದಣಿದಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಸದ್ಯ ಒಂದು ತಿಂಗಳ ವಿಶ್ರಾಂತಿಯಲ್ಲಿದ್ದು, ಶೀಘ್ರವೇ ಪಕ್ಷದ ಚಟುವಟಿಕೆಗೆ ಮರಳಿ ಮತ್ತೆ ಸಕ್ರಿಯರಾಗಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದ್ದಾರೆ.

ರಮ್ಯಾ ಅವರು ಆಕ್ಟೀವ್ ಆಗಿಲ್ಲ ಅನ್ನೋದಕ್ಕೆ ಯಾವುದೇ ಸಾಕ್ಷಿಯಿಲ್ಲ. ಅವರು ಬಹಳ ಸಕ್ರಿಯವಾಗಿ ರಾಜಕೀಯ ಹಾಗೂ ಪಕ್ಷ ಸಂಘಟನೆಯಲ್ಲಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಿಕೊಂಡು ಯಶಸ್ವಿಯಾಗಿದ್ದರು. ಕಳೆದ ಬಾರಿ ಬಹಳಷ್ಟು ಟಾರ್ಗೆಟ್ ಮಾಡಿ ಬಿಜೆಪಿ ವೈಫಲ್ಯಗಳನ್ನು ತೋರಿಸುವ ಮೂಲಕ ಹೆಚ್ಚು ಕೆಲಸ ಮಾಡಿದ್ದರು ಎಂಬುದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದರು.

ಚುನಾವಣೆ ವೇಳೆ ಬಹಳ ಕ್ರಿಯಾಶೀಲವಾಗಿದ್ದು ವಿವಾದಕ್ಕೆ ಸಿಲುಕಿದ್ದ ರಮ್ಯಾ ಅವರು ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಏಕಾಏಕಿ ಕಣ್ಮರೆಯಾಗಿದ್ದರು. ತಮ್ಮ ಟ್ವಿಟರ್ ಖಾತೆಯಿಂದಲೂ ದೂರ ಉಳಿದು ಚರ್ಚೆಗೆ ಗುರಿಯಾಗಿದ್ದರು. ಇದಕ್ಕೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಸ್ಪಷ್ಟನೆ ನೀಡಿದ್ದು, ಚುನಾವಣೆಯ ಸಂದರ್ಭದಲ್ಲಿ ರಮ್ಯಾ ನೇತೃತ್ವದ ಸಾಮಾಜಿಕ ಜಾಲತಾಣದ ತಂಡ ದಿನದ 24 ಗಂಟೆಯೂ ಕೆಲಸ ಮಾಡಿತ್ತು. ಹೀಗಾಗಿ ಸ್ವಲ್ಪ ಅವರಿಗೂ ವಿಶ್ರಾಂತಿ ಬೇಕು ಅಂತ ಅನಿಸಿರುತ್ತದೆ. ಸದ್ಯ ವಿಶ್ರಾಂತಿಯಲ್ಲಿದ್ದು ನಂತರ ಸಕ್ರಿಯರಾಗಲಿದ್ದಾರೆ ಎಂದು ಹೇಳಿದರು.

ರಮ್ಯಾ ಅವರು ಚುನಾವಣೆ ಸಮಯದಲ್ಲಿ ಸಮೀಕ್ಷೆಗಾಗಿ 8 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪ ಸುಳ್ಳಾಗಿದೆ. ಅಂತಹ ಸಂದರ್ಭ ಬಂದಿರಲು ಸಾಧ್ಯವೇ ಇಲ್ಲ ಎಂದು ನಾನು ಅಂದುಕೊಳ್ಳುತ್ತೇನೆ. ಹೀಗಾಗಿ ಸತ್ಯ ಗೊತ್ತಿಲ್ಲದೆ ಅದರ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ಆರೋಪ ನಿಜ ಆದರೆ ಸಾಕ್ಷಿಗಳನ್ನು ಕೊಡಲಿ. ಸುಮ್ಮನೆ ಗಾಳಿ ಸುದ್ದಿ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ರಮ್ಯಾ ಅವರೊಂದಿಗೆ ನಾನು ಚೆನ್ನಾಗಿಯೇ ಇದ್ದೇನೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು ಕೂಡ. ದೆಹಲಿಗೆ ಹೋದಾಗ ನಾನು ಅವರನ್ನು ಭೇಟಿ ಮಾಡುತ್ತೇನೆ. ಅವರೊಬ್ಬರು ಕಾರ್ಯಕರ್ತರಾಗಿ ಏನು ಕೆಲಸ ಮಾಡಬೇಕೋ ಅದನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿದ್ದಾರೆ . ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಆದರೆ ನಮ್ಮ ಕೆಲಸ, ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ, ಮುಂದಿನ ಕಾರ್ಯಕ್ರಮಗಳನ್ನು ಆರಂಭಿಸಲಿದ್ದೇವೆ ಎಂದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago