ಬೆಂಗಳೂರು:ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಮಾವೇಶಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಹಿರಂಗ ಆಹ್ವಾನ ನೀಡಿದ್ದಾರೆ.
ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಜೆಡಿಎಸ್ ಪಕ್ಷವನ್ನು ಕಟ್ಟೇ ಕಟ್ಟುತ್ತೇವೆ ಎಂಬ ಹಠ ತೊಟ್ಟಿರುವ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ತಯಾರಿಸುವ ಉದ್ದೇಶದಿಂದ ಅರಮನೆ ಮೈದಾನದಲ್ಲಿ ನಿಷ್ಠಾವಂತ ಕಾರ್ಯಕರ್ತರ ಸಮಾವೇಶ ನಡೆಸಲಾಗುತ್ತಿದೆ.
ರಾಜ್ಯದ ಜನರಿಗೆ ಪ್ರಾದೇಶಿಕ ಪಕ್ಷವೊಂದರ ಅನಿವಾರ್ಯತೆ ಅಥವಾ ಅಗತ್ಯ ಇಂದಲ್ಲ ನಾಳೆ ಅರಿವಾಗುತ್ತದೆ ಎಂಬ ವಿಶ್ವಾಸ ನಮ್ಮದು.ಅದಕ್ಕಾಗಿ ಜೆಡಿಎಸ್ ಪಕ್ಷವನ್ನು ಉಳಿಸಿ ಬೆಳೆಸಬೇಕು.ಹಿಂದೇ ಆಗಿರುವ ತಪ್ಪುಗಳನ್ನು ತಿದ್ದುಕೊಂಡು ಹೊಸ ಹೆಜ್ಜೆ ಇಡಬೇಕೆಂದು ಬಹಿರಂಗ ಆಹ್ವಾನ ಪತ್ರದಲ್ಲಿ ಗೌಡರು ತಿಳಿಸಿದ್ದಾರೆ.
ಲೋಕಸಭಾ ಸದಸ್ಯರ, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, 2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಜಿಲ್ಲಾ ಹಾಗೂ ರಾಜ್ಯಮಟ್ಟದ ಪಕ್ಷದ ಪದಾಧಿಕಾರಿಗಳು ಸೇರಿದಂತೆ ನಿಷ್ಠಾವಂತ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…