ಬೆಂಗಳೂರು:ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ಯುಪಿಎ- 2 ಸರಕಾರದ ನೀತಿ ಮತ್ತು ಯೋಜನೆಗಳು ಅಸ್ತವ್ಯಸ್ತ ಆಗಲು ಮತ್ತು ಹಲವಾರು ಬಾರಿ ಪಕ್ಷವು ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳಲು ಜೈರಾಂ ರಮೇಶ್ ಕಾರಣ ಎಂದು ಹೇಳಿದರು.
ಜೊತೆಗೆ ಶಶಿ ತರೂರ್ ಅವರನ್ನೂ ತರಾಟೆಗೆತ್ತಿಕೊಂಡಿರುವ ಮೊಯ್ಲಿ, ಪ್ರಧಾನಿ ಮೋದಿಯನ್ನು ಶ್ಲಾಘಿಸುವ ಮೂಲಕ ವಿಪಕ್ಷಗಳು ಪ್ರಧಾನಿ ವಿರುದ್ಧ ಮಾಡುತ್ತಿರುವ ಟೀಕೆಯ ವಿಶ್ವಾಸಾರ್ಹತೆಯನ್ನು ತರೂರ್ ಕುಂದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಇಬ್ಬರು ನಾಯಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಮೊಯ್ಲಿ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಯಾವ ಮುಖಂಡರೂ ಕಾಂಗ್ರೆಸ್ ಪಕ್ಷ ಅಥವಾ ಅದರ ನಾಯಕತ್ವಕ್ಕೆ ಸೇವೆ ಸಲ್ಲಿಸುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ . ಯಾಕೆಂದರೆ ಸಚಿವರಾಗಿ ಪ್ರತಿನಿಧಿಸಿದ್ದವರು ವಿಪಕ್ಷದಲ್ಲಿ ಕುಳಿತುಕೊಳ್ಳುವಾಗ ಆಡಳಿತ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳಬೇಕು ಎಂದು ಮೊಯ್ಲಿ ಹೇಳಿದರು.
ಶಶಿ ತರೂರ್ ಓರ್ವ ಪ್ರಬುದ್ಧ ರಾಜಕಾರಣಿ ಎಂದು ಯಾವತ್ತೂ ಪರಿಗಣಿಸಿಲ್ಲ. ಆಗಿಂದಾಗ್ಗೆ ಪ್ರಚಾರದಲ್ಲಿ ಇರಲು ಏನಾದರೊಂದು ಹೇಳುತ್ತಿರುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.
ಇಂತಹ ಜನರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಇದು ಸಕಾಲ. ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಎಂದು ಮೊಯ್ಲಿ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…